ಶನಿವಾರ, ಫೆಬ್ರವರಿ 29, 2020
19 °C

ಕಪ್ಪುಪಟ್ಟಿ ಕಟ್ಟಿ ಪರೀಕ್ಷೆ ಕಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಪುರ: ವೇತನ ತಾರತಮ್ಯವನ್ನು ಸರಿಪಡಿಸುವಂತೆ ಹಾಗೂ ಕುಮಾರ್‌ ನಾಯ್ಕ್‌ ವರದಿಯನ್ನು ಸಂಪೂರ್ಣವಾಗಿ ಜಾರಿಗೊಳಿಸುವಂತೆ ಒತ್ತಾಯಿಸಿ ಕಾಲೇಜಿನ ಉಪನ್ಯಾಸಕರು ಕಪ್ಪುಪಟ್ಟಿ ಕಟ್ಟಿಕೊಂಡು ಸೋಮವಾರ ಪರೀಕ್ಷಾ ಕಾರ್ಯ ನಿರ್ವಹಿಸಿದರು.

ಪ್ರಸ್ತುತ ಪ್ರಥಮ ಪಿ.ಯು.ಸಿ ಪರೀಕ್ಷೆಯು ಪ್ರಾರಂಭಗೊಂಡಿದ್ದು ಎಲ್ಲ‌ ಪಿಯು ಕಾಲೇಜುಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಕನಕಪುರ ತಾಲ್ಲೂಕು ಉಪನ್ಯಾಸಕರ ಸಂಘದ ಅಧ್ಯಕ್ಷ ಸಿದ್ದೇಗೌಡ ಅವರ ನೇತೃತ್ವದಲ್ಲಿ ಉಪನ್ಯಾಸಕರು ಕೈ ತೋಳಿಗೆ ಕಪ್ಪುಪಟ್ಟಿ ಕಟ್ಟಿಕೊಂಡೇ ಪರೀಕ್ಷಾ ಕೊಠಡಿಯಲ್ಲಿ ಕಾರ್ಯ ನಿರ್ವಹಿಸಿದರು.

ತಾಲ್ಲೂಕಿನ ಕೋಡಿಹಳ್ಳಿ, ಹುಣಸನಹಳ್ಳಿ, ಉಯ್ಯಂಬಳ್ಳಿ, ಸಾತನೂರು, ಚಿಕ್ಕಮುದುವಾಡಿ, ಮರಳವಾಡಿ, ಹಾರೋಹಳ್ಳಿ, ಜೈನ್‌ ಕಾಲೇಜು, ರೂರಲ್‌ ಕಾಲೇಜು, ಎಂಎಸ್‌ಎಸ್‌ ಕಾಲೇಜುಗಳಲ್ಲಿ ಅರ್ಥಶಾಸ್ತ್ರ ವಿಷಯದ ಪರೀಕ್ಷೆ ನಡೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು