ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತ ವಿರೋಧಿ ನೀತಿ: ಸಿಪಿಎಂ ಪ್ರತಿಭಟನೆ

Last Updated 3 ಡಿಸೆಂಬರ್ 2020, 14:35 IST
ಅಕ್ಷರ ಗಾತ್ರ

ಆನೇಕಲ್: ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನು ಬೆಂಬಲಿಸಿ ಆನೇಕಲ್‌ನಲ್ಲಿ ಸಿಪಿಎಂ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.

ಮುಖಂಡ ಡಿ.ಮಹದೇಶ್‌ ಮಾತನಾಡಿ, ‘ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಪ್ರಯತ್ನ ನಡೆಸುತ್ತಿದೆ. ದೆಹಲಿಯಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಕೇಂದ್ರ ಸರ್ಕಾರ ರೈತರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಮನ್ನಣೆ ನೀಡದೇ ತಮ್ಮ ಅಧಿಕಾರ ಬಲದಿಂದ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾಗಿದೆ. ಆದರೆ ದೇಶಾದ್ಯಂತ ರೈತರು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸುತ್ತಿದ್ದಾರೆ. ದೆಹಲಿಯ ರೈತರ ಪ್ರತಿಭಟನೆಗೆ ಎಲ್ಲೆಡೆ ಬೆಂಬಲ ವ್ಯಕ್ತವಾಗುತ್ತಿದೆ’ ಎಂದರು.

ಮುಖಂಡ ಅಶೋಕ್‌ ಮಾತನಾಡಿ, ‘ಭೂಸುಧಾರಣಾ ಕಾಯ್ದೆಗೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಬೆಂಬಲ ಬೆಲೆಯನ್ನು ನಿಲ್ಲಿಸಿರುವುದು ಸೇರಿದಂತೆ ಹಲವಾರು ರೈತವಿರೋಧಿ ಕಾಯ್ದೆಗಳನ್ನು ಸರ್ಕಾರ ಜಾರಿಗೆ ತಂದಿದೆ. ಇದರಿಂದಾಗಿ ರೈತರ ಭೂಮಿ ಬಂಡವಾಳಶಾಹಿ ಪಾಲಾಗುತ್ತಿದೆ. ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಹಾಗಾಗಿ ಎಲ್ಲರೂ ಒಗ್ಗೂಡಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತವಿರೋಧಿ ನೀತಿಯನ್ನು ಖಂಡಿಸಿ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಸಂದೇಶವನ್ನು ರವಾನಿಸಬೇಕಾಗಿದೆ’ ಎಂದರು.

ಸಿಪಿಎಂ ಮುಖಂಡರಾದ ಬಿ.ಎನ್‌.ಮಂಜುನಾಥ್, ಬಾಲರಾಜು, ಸುರೇಶ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT