ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಐವನ್‌ ಡಿಸೋಜಾ ಪ್ರತಿಕೃತಿ ದಹಿಸಿ ಪ್ರತಿಭಟನೆ 

ಮುಖ್ಯಮಂತ್ರಿ ರಾಜೀನಾಮೆಗೆ ಬಿಜೆಪಿ ಆಗ್ರಹ
Published 22 ಆಗಸ್ಟ್ 2024, 16:17 IST
Last Updated 22 ಆಗಸ್ಟ್ 2024, 16:17 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಅವರ ಹೇಳಿಕೆ ಖಂಡಿಸಿ ಹಾಗೂ ಮುಖ್ಯಮುಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಗುರವಾರ ತಾಲ್ಲೂಕು ಕಚೇರಿ ವೃತ್ತದಲ್ಲಿ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿತು.

ಐವನ್‌ ಡಿಸೋಜಾ ಅವರು ಬಾಂಗ್ಲಾದೇಶದ ರೀತಿ ಪ್ರತಿಭಟನೆ ಮಾಡುವುದಾಗಿ ಹೇಳಿಕೆ ನೀಡಿರುವುದು ದೇಶ ದ್ರೋಹದ ಕೃತ್ಯವಾಗಿದೆ ಎಂದು ಬಿಜೆಪಿ ಜಿಲ್ಲಾ ಘಟಕದಿಂದ ಐವಾನ್‌ ಡಿಸೋಜ ಅವರ ಪ್ರತಿಕೃತಿ ದಹಿಸುವ ಮೂಲಕ ಪ್ರತಿಭಟನೆ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಹಗರಣವನ್ನು ಮುಚ್ಚಿಕೊಳ್ಳಲು ರಾಜ್ಯಪಾಲರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಮಳೆಯಿಂದ ಬೆಳೆ ಕಳೆದುಕೊಂಡು ಕಂಗಾಲಾಗಿರುವ ರೈತರ ನೆರವಿಗೆ ನಿಲ್ಲಬೇಕಿರುವ ಸಚಿವರು ರಾಜ್ಯಪಾಲರ ವಿರುದ್ಧ ಆರೋಪ ಮಾಡುವಲ್ಲಿ ಕಾಲಾಹರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಕೃಷ್ಣಯ್ಯ ದೂರಿದರು‌.

ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಅವರೇ ನೇರವಾಗಿ ಭಾಗಿಯಾಗಿದ್ದಾರೆ. ಹಾಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವ ಮೂಲಕ ನಿಷ್ಪಕ್ಷಪಾತ ತನಿಖೆಗೆ ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.

ಪ್ರಶಿಕ್ಷಣ ಪ್ರಕೋಷ್ಟ ರಾಜ್ಯ ಸಮಿತಿ ಸದಸ್ಯ ಆರ್.ಗೋಪಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಂತಿವೆಂಕಟೇಶ್‌, ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ್‌, ನಗರ ಘಟಕದ ಅಧ್ಯಕ್ಷ ಕೆ.ಬಿ.ಮುದ್ದಪ್ಪ, ನಗರಾಡಳಿತ ಪ್ರಕೋಷ್ಟ ಜಿಲ್ಲಾ ಸಂಚಾಲಕ ಕೆ.ಎಚ್.ವೆಂಕಟರಾಜು, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ಸುನೀಲ್‌, ಹೊಸಕೋಟೆ ತಾಲ್ಲೂಕು ಎಸ್‌.ಸಿ ಮೋರ್ಚಾ ಅಧ್ಯಕ್ಷ ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಜೆ.ಮಂಜುನಾಥ್‌ ಹಾಗೂ ನಗರಸಭಾ ಸದಸ್ಯರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT