ಕನ್ನಡ ಶಾಲೆಗಳಲ್ಲಿ ಮಲಯಾಳಿ ಶಿಕ್ಷಕರ ನೇಮಕ: ಪ್ರತಿಭಟನೆ

7

ಕನ್ನಡ ಶಾಲೆಗಳಲ್ಲಿ ಮಲಯಾಳಿ ಶಿಕ್ಷಕರ ನೇಮಕ: ಪ್ರತಿಭಟನೆ

Published:
Updated:
Deccan Herald

ದೊಡ್ಡಬಳ್ಳಾಪುರ: ಕಾಸರಗೋಡಿನ ಕನ್ನಡ ಶಾಲೆಗಳಲ್ಲಿ ಮಲಯಾಳಿ ಶಿಕ್ಷಕರನ್ನು ನೇಮಿಸಿರುವುದನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ ಶೆಟ್ಟಿ ಬಣ) ಕಾರ್ಯಕರ್ತರು ಸೋಮವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಲಾಯಿತು.

ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ರವಿ ಮಾತನಾಡಿ, ಕಾಸರಗೋಡಿನಲ್ಲಿ ಸುಮಾರು 84 ಕನ್ನಡ ಶಾಲೆಗಳಿವೆ. ಸುಮಾರು 20 ಸಾವಿರ ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಆದರೆ ಕೇರಳ ಸರ್ಕಾರ ಮಲಯಾಳಿ ಶಿಕ್ಷಕರನ್ನು ಕನ್ನಡ ಶಾಲೆಗಳಿಗೆ ನೇಮಿಸುವ ಮೂಲಕ ಕನ್ನಡ ಕಲಿಯುವ ಮಕ್ಕಳ ಶಿಕ್ಷಣಕ್ಕೆ ಮಾರಕವಾಗಿ ಪರಿಣಮಿಸಿದೆ ಎಂದು ದೂರಿದರು.

ತ್ರಿಭಾಷಾ ಸೂತ್ರದನ್ವಯ ಮಾತೃಭಾಷಾ ಶಿಕ್ಷಣಕ್ಕೆ ಒತ್ತು ನೀಡಬೇಕು. ಮೂರು ಭಾಷೆಗಳಲ್ಲಿ ಶಿಕ್ಷಣವನ್ನು ಆಯಾ ಭಾಷೆಗಳಲ್ಲಿ ನೀಡಬೇಕು ಎನ್ನುವ ಸುಪ್ರೀಂ ಕೋರ್ಟ್ ಆದೇಶವಿದ್ದರೂ ಮಲೆಯಾಳಿ ಶಿಕ್ಷರನ್ನು ನೇಮಿಸಲಾಗುತ್ತಿದೆ. ಕನ್ನಡಿಗರನ್ನು ಮಲಯಾಳಿಗಳನ್ನಾಗಿ ಮಾಡುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.

‘ಅಲ್ಲಿನ ಕನ್ನಡದ ವಿದ್ಯಾರ್ಥಿಗಳು ಶಾಲೆಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದಾರೆ. ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ನಮ್ಮವರ ಹಿತರಕ್ಷಣೆ ಮಾಡಬೇಕು’ ಎಂದು ಆಗ್ರಹಿಸಿದರು.

ಕರವೇ ತಾಲ್ಲೂಕು ಗೌರವ ಅಧ್ಯಕ್ಷ ಪು.ಮಹೇಶ್, ಅಧ್ಯಕ್ಷ ಎಚ್.ಎಸ್. ವೆಂಕಟೇಶ್, ಉಪಾಧ್ಯಕ್ಷ ಶ್ರೀನಗರ ಬಷೀರ್, ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್. ವೇಣು, ಕಾರ್ಯದರ್ಶಿ ಅಮ್ಮು, ಮುಖಂಡರಾದ ಆನಂದ್, ಬಾಬು, ಮಂಜು, ಯಶವಂತ್ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !