ನೆಲಮಂಗಲ: ‘ಅಗತ್ಯ ದಾಖಲೆಗಳನ್ನು ಪಡೆಯಲು ಲಂಚಕ್ಕೆ ಬೇಡಿಕೆ ಇಡುತ್ತಾರೆ’ ಎಂದು ಆರೋಪಿಸಿ ಪಂಚಾಯಿತಿ ಸದಸ್ಯರು ಮತ್ತು ಸಾರ್ವಜನಿಕರು ಪಿಡಿಒ ವಿರುದ್ಧ ಪ್ರತಿಭಟನೆ ನಡೆಸಿ ಬೆಂಗಳೂರು ಉತ್ತರ ತಾಲ್ಲೂಕು ದಾಸನಪುರ ಪಂಚಾಯಿತಿ ಕಚೇರಿಗೆ ಶನಿವಾರ ಬೀಗ ಹಾಕಿ ಪ್ರತಿಭಟಿಸಿದರು.

‘ಖಾತೆ, ಮರಣ ಪ್ರಮಾಣಪತ್ರ ಹಾಗೂ ಇತರೆ ಕಂದಾಯ, ವೈಯಕ್ತಿಕ ದಾಖಲೆಗಳನ್ನು ಪಡೆಯಲು ಅರ್ಜಿ ಹಾಕಿ, ಹಣ ನೀಡುವವರೆಗೂ ಖಡತಗಳು ಮುಂದಕ್ಕೆ ಹೋಗುವುದಿಲ್ಲ. ವಿಲೇವಾರಿ ಆಗುವುದಿಲ್ಲ. ಕೂಡಲೇ ಪಿಡಿಒ ಉಷಾ ಅವರನ್ನು ಅಮಾನತು, ಇಲ್ಲವೆ ವರ್ಗಾಯಿಸಬೇಕು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಬರುವವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ’ ಎಂದು ಪಂಚಾಯಿತಿ ಸದಸ್ಯರು ಹಾಗೂ ಸಾರ್ವಜನಿಕರು ಪ್ರತಿಭಟಿಸಿದರು.

‘ಸಾರ್ವಜನಿಕರೊಂದಿಗೆ ಅಗೌರವದಿಂದ ನಡೆದುಕೊಳ್ಳುತ್ತಾರೆ. ನೇರವಾಗಿ ಲಂಚಕ್ಕೆ ಬೇಡಿಕೆ ಇಡುತ್ತಾರೆ. ಹಣ ಕೊಟ್ಟವರಿಗೆ ಕೆಲಸ ಮಾಡಿಕೊಡುತ್ತಾರೆ. ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗುವುದಿಲ್ಲ’ ಎಂದು ಮಧುಸೂದನ್ ದೂರಿದರು.

‘ಖಡತ ವಿಲೇವಾರಿ ಮಾಡಲು ನ್ಯಾಯಾಲಯದ ಆದೇಶವಿದ್ದರೂ ಆಗುವುದಿಲ್ಲ ಎಂದು ಉತ್ತರ ಹೇಳುತ್ತಾರೆ, ಕಾರಣವನ್ನೂ ತಿಳಿಸುತ್ತಿಲ್ಲ. 11 ತಿಂಗಳಿಂದ ಅಲೆದು ಅಲೆದು ಸುಸ್ತಾಗಿದೆ’ ಎಂದು ಹನುಮಂತರಾಯಪ್ಪ ಹೇಳಿದರು.

ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ, ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಬಂದು ಬೀಗ ತೆಗೆಸಿ ಪಿಡಿಒ ಹಾಗೂ ಸಿಬ್ಬಂದಿಯನ್ನು ಒಳಗೆ ಕಳುಹಿಸಿದರು. ಪ್ರತಿಭಟನಕಾರರು ಧಿಕ್ಕಾರ ಕೂಗುವ ವೇಳೆ, ಪಿಡಿಒ ಉಷಾ ಜೈಕಾರ ಕೂಗಿದರು.

ಸ್ಥಳಕ್ಕೆ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಭೇಟಿ ನೀಡಿದರು. ಸಾರ್ವಜನಿಕರ ದೂರುಗಳನ್ನು ಆಲಿಸಿ ತನಿಖೆ ನಡೆಸಿ ಹತ್ತು ದಿನಗಳ ಒಳಗಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.