ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಣಾಮಕಾರಿ ಆರೋಗ್ಯ ಶಿಕ್ಷಣ ಒದಗಿಸಿ

ಮಾಹಿತಿ, ಶಿಕ್ಷಣ ಮತ್ತು ಸಂವಹನ ಚಟುವಟಿಕೆ ಕುರಿತು ಸಭೆಯಲ್ಲಿ ಚರ್ಚೆ
Last Updated 19 ಏಪ್ರಿಲ್ 2020, 15:03 IST
ಅಕ್ಷರ ಗಾತ್ರ

ದೇವನಹಳ್ಳಿ: ಕೊರೊನಾ ಹರಡದಂತೆ ನಿಯಂತ್ರಿಸಲು ಜಿಲ್ಲೆಯಲ್ಲಿ ಹೆಚ್ಚು ಪರಿಣಾಮಕಾರಿ ಆರೋಗ್ಯ ಶಿಕ್ಷಣ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಜನರಲ್ಲಿ ಕೋವಿಡ್-19 ಕುರಿತು ಜಾಗೃತಿ ಮೂಡಿಸಬೇಕೆಂದು ಮಾಹಿತಿ, ಶಿಕ್ಷಣ ಮತ್ತು ಸಂವಹನ (ಐಇಸಿ) ಚಟುವಟಿಕೆಗಳ ಜಿಲ್ಲಾ ತಂಡ ಮತ್ತು ತರಬೇತಿ ಸಮಿತಿ ಅಧ್ಯಕ್ಷರಾದ ಟಿ.ಆರ್.ಶೋಭ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಕೋವಿಡ್-19 ಐ.ಇ.ಸಿ ಚಟುವಟಿಕೆಗಳ ಜಿಲ್ಲಾ ತಂಡ ಮತ್ತು ತರಬೇತಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಮಾಹಿತಿ,ಶಿಕ್ಷಣ ಮತ್ತು ಸಂವಹನ (ಐ.ಇ.ಸಿ) ಕಾರ್ಯಕ್ರಮದಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಕೋವಿಡ್-19 ಹರಡದಂತೆ ತಡೆಯಲು ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಲಾಗುತ್ತಿದೆ ಎಂದರು.

ಗ್ರಾಮಗಳಲ್ಲಿ ಜನರು ತಮ್ಮ ಸುತ್ತಲಿನ ಪ್ರದೇಶ ಸ್ವಚ್ಛವಾಗಿಟ್ಟುಕೊಳ್ಳಬೇಕು. ವೈಯಕ್ತಿಕ ಶುಚಿತ್ವ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಮನೆಯಿಂದ ಹೊರ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಕ್ವಾರಂಟೈನ್‌ ನಲ್ಲಿರಿಸಲಾದ ಕುಟುಂಬಗಳು ಬಳಸಿ ಬಿಸಾಡುವ ಮಾಸ್ಕ್, ಇನ್ನಿತರ ಜೈವಿಕ ತ್ಯಾಜ್ಯ ವಸ್ತುಗಳನ್ನು ಪ್ರತ್ಯೇಕವಾಗಿ ವಿಲೇವಾರಿ ಮಾಡುವ ಕುರಿತು ಸಭೆಯಲ್ಲಿ ಚರ್ಚಿಸಿ ಅಂತಿಮಗೊಳಿಸಲಾಯಿತು. ಸಂಬಂಧಿಸಿದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕ್ವಾರಂಟೈನ್‌ ನಲ್ಲಿರಿಸಲಾದ ವ್ಯಕ್ತಿ ಅಥವಾ ಮನೆಗಳಿಂದ ಪ್ರತ್ಯೇಕವಾಗಿ ಜೈವಿಕ‌ ತ್ಯಾಜ್ಯ ಸಂಗ್ರಹಿಸಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಜೈವಿಕ ವಿಲೇವಾರಿ ಮಾಡಬೇಕು ಎಂದು ಸೂಚಿಸಿದರು.

ಐಇಸಿ ಚಟುವಟಿಕೆಗಳಡಿ ಆಶಾ ಕಾರ್ಯಕರ್ತೆಯರಿಗೆ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ, ಗ್ರಾಮ ಪಂಚಾಯತಿ ಕಾರ್ಯಕಾರಿ ಸದಸ್ಯರಿಗೆ ಕೋವಿಡ್-19 ಕುರಿತು ತರಬೇತಿ ನೀಡಬೇಕು. ಮನೆ-ಮನೆ ಭೇಟಿ ನೀಡುವ ಆಶಾ ಕಾರ್ಯಕರ್ತೆಯರು, ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿಗೆ ಎನ್-95 ಮಾಸ್ಕ್, ಗ್ಲೌಸ್, ಸ್ಯಾನಿಟೈಜರ್ ಒದಗಿಸಿ ಸುರಕ್ಷತಾ ಕ್ರಮಕೈಗೊಳ್ಳಬೇಕೆಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಐಇಸಿ ಚಟುವಟಿಕೆಯಡಿ ಹೊಸಕೋಟೆ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ ಗ್ರಾಮಗಳಿಗೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಸಿಬ್ಬಂದಿ ಮನೆ-ಮನೆಗೆ ಭೇಟಿ ನೀಡಿ ಅಂದಾಜು1800 ಕುಟುಂಬಗಳ 8000 ಜನರ ಥರ್ಮಲ್ ಸ್ಕ್ರೀನಿಂಗ್ ನಡೆಸಿ, ಆರೋಗ್ಯ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಹೇಳಿದರು.

ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ 800 ಕುಟುಂಬಗಳ 3200 ಜನರು, ದೊಡ್ಡಬಳ್ಳಾಪುರ ತಾಲ್ಲೂಕು ಹಾಗೂ ನೆಲಮಂಗಲ ತಾಲ್ಲೂಕು ವ್ಯಾಪ್ತಿಯಲ್ಲಿ 1200 ಕುಟುಂಬಗಳ 4500 ಜನರು, ಥರ್ಮಲ್ ಸ್ಕ್ರೀನಿಂಗ್ ನಡೆಸಿ, ಆರೋಗ್ಯ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಗೋವಿಂದರಾಜು ಸೇರಿದಂತೆ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT