ವಿಜಯಪುರ:ಪಟ್ಟಣದ ಪೊಲೀಸ್ ಠಾಣೆಗೆ ಸಬ್ ಇನ್ಸ್ಪೆಕ್ಟರ್ ಆಗಿ ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಮ್ಮ ಅವರನ್ನು ನೇಮಿಸಲಾಗಿದೆ. ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಂದೀಶ್ ಅವರನ್ನು ನೆಲಮಂಗಲ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈರಮ್ಮ ಅವರು ಠಾಣೆಯಲ್ಲಿ ಅಧಿಕಾರ ಸ್ವೀಕಾರ ಮಾಡಿಕೊಂಡಿದ್ದಾರೆ.

ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಯಂಬ್ರಹಳ್ಳಿ ಗ್ರಾಮಸ್ಥರು ಹಿಡಿದಿದ್ದ ಕಳ್ಳನನ್ನು ವಶಕ್ಕೆ ಪಡೆಯಲು ಸ್ಥಳಕ್ಕೆ ಬಾರದ ಪೊಲೀಸರ ನಿರ್ಲಕ್ಷ್ಯ ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಸಂಬಂಧ ಕಾನ್ಸ್ಪೆಬಲ್ ಒಬ್ಬರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದ್ದು, ಸಬ್ ಇನ್ಸ್ಪೆಕ್ಟರ್ ನಂದೀಶ್ ಅವರನ್ನೂ ವರ್ಗಾವಣೆ ಮಾಡಲಾಗಿದೆ.

ಠಾಣೆ ಆರಂಭವಾದಾಗಿನಿಂದ ಇದುವರೆಗೂ ಮಹಿಳಾ ಸಬ್ ಇನ್ಸ್ಪೆಕ್ಟರ್ ನೇಮಕವಾಗಿರಲಿಲ್ಲ. ಈಗ ಮಹಿಳಾ ಪಿಎಸ್ಐ ನೇಮಕವಾಗಿರುವ ಕಾರಣ ಸ್ಥಳೀಯ ಮಹಿಳಾ ಸಂಘ ಸಂಸ್ಥೆಗಳು ಹಾಗೂ ಮಹಿಳೆಯರಲ್ಲಿ ಧೈರ್ಯ ಬಂದಿದೆ.

‘ನಾವು ಠಾಣೆಗೆ ಹೋಗಿ ಸಮಸ್ಯೆಗಳನ್ನು ಮುಕ್ತವಾಗಿ ಹೇಳಿಕೊಳ್ಳಲು ಸ್ವಲ್ಪ ಕಷ್ಟವಾಗುತ್ತಿತ್ತು. ಮಹಿಳಾ ಸಿಬ್ಬಂದಿ ಹೆಚ್ಚು ಇಲ್ಲದ ಕಾರಣ ಮಧ್ಯವರ್ತಿಗಳ ಮೊರೆ ಹೋಗಬೇಕಾಗಿತ್ತು. ಈಗ ಪಿಎಸ್ಐ ಆಗಿ ಮಹಿಳೆ ಬಂದಿರುವ ಕಾರಣ ಧೈರ್ಯವಾಗಿ ಹೋಗಿ ಸಮಸ್ಯೆ ಹೇಳಿಕೊಳ್ಳಲು ಅನುಕೂಲವಾಗಲಿದೆ’ ಎಂದು ಮಹಿಳಾ ಸ್ವಸಹಾಯ ಸಂಘದ ಸದಸ್ಯೆ ನಾಗರತ್ನಮ್ಮ ಹೇಳಿದರು.

ಮತ್ತೊಬ್ಬ ಕಾನ್ಸ್ಪೆಬಲ್ ಅಮಾನತು:ವಿಜಯಪುರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮತ್ತೊಬ್ಬ ಕಾನ್ಸ್ಟೆಬಲ್ ಶ್ರೀನಿವಾಸ್ ಅವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ದೊಡ್ಡಬಳ್ಳಾಪುರದಲ್ಲಿ ಯುವತಿಯೊಬ್ಬಳ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪಹರಣಕಾರರೊಂದಿಗೆ ಈ ಕಾನ್ಸ್ಟೆಬಲ್ ಕಾರಿನಲ್ಲಿ ತೆರಳಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೋ.ನ. ವಂಶಿಕೃಷ್ಣ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.