ದೊಡ್ಡಬಳ್ಳಾಪುರ: ತಾಲ್ಲೂಕಿನ ಬಾಶೆಟ್ಟಿಯಲ್ಲಿ ಅಜಾಕ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ₹4 ಕೋಟಿ ವೆಚ್ಚದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಟ್ಟಡಕ್ಕೆ ನಿರ್ಮಾಣಕ್ಕೆ ಶಾಸಕ ಧೀರಜ್ ಮುನಿರಾಜು ಹಾಗೂ ಅಜಾಕ್ಸ್ ಟ್ರಸ್ಟ್ ಅಧ್ಯಕ್ಷ ಕೆ.ವಿಜಯ್ ಗುರುವಾರ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಧೀರಜ್ ಮುನಿರಾಜು, ಅಜಾಕ್ಸ್ ಕಂಪನಿಯು ಅನೇಕ ವರ್ಷಗಳಿಂದ ಸಾಮಾಜಿಕ ಕಾರ್ಯದಲ್ಲಿ ತೊಡಗಿಕೊಂಡಿದೆ. ಈಗಾಗಲೇ ಬಾಶೆಟ್ಟಿಯಲ್ಲಿ ಅಜಾಕ್ಸ್ ಕಂಪನಿಯು ₹8 ಕೋಟಿ ವೆಚ್ಚದಲ್ಲಿ ಸರ್ಕಾರಿ ಪಬ್ಲಿಕ್ ಶಾಲೆ ನಿರ್ಮಿಸಿಕೊಟ್ಟಿದೆ. ಇಲ್ಲಿನ ಸೌಲಭ್ಯಗಳಿಗೆ ಮನಸೋತಿರುವ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಇದೇ ಶಾಲೆಗೆ ದಾಖಲು ಮಾಡಿದ್ದಾರೆ ಎಂದರು.

ಅಜಾಕ್ಸ್ ಕಂಪನಿಯ ಸಿಎಸ್ ಅಧಿಕಾರಿ ಸಿ.ಮಜುನಾಥ್, ನೂತನ ಪಿಯು ಕಾಲೇಜಿನಲ್ಲಿ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗಳು ಒಳಗೊಂಡಿದ್ದು, ಸುಸಜ್ಜಿತ ಲ್ಯಾಬ್, ಸ್ಮಾರ್ಟ್ ಕ್ಲಾಸ್ ಹೊಂದಿರಲಿದೆ. ಮುಂದಿನ ಶಿಕ್ಷಣಿಕ ವರ್ಷದಿಂದ ತರಗತಿಗಳು ಆರಂಭವಾಗಲಿವೆ ಎಂದರು.

ಡಿಡಿಪಿಐ ಬೈಲ ಆಂಜನಪ್ಪ, ಪಿಯುಸಿ ವಿಭಾಗದ ಡಿಡಿ ಮೋಹನ್ಕುಮಾರ್ ಹಾಗೂ ಸ್ಥಳೀಯ ಮುಖಂಡರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.