ದೊಡ್ಡಬಳ್ಳಾಪುರ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಮಾರ್ಚ್ 20 ರಿಂದ ಆರಂಭವಾಗುವ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕರಿಸುವ ನಿರ್ಧಾರಕ್ಕೆ ರಾಜ್ಯ ಅನುದಾನಿತ ಪದವಿ ಪೂರ್ವ ಕಾಲೇಜುಗಳ ನೌಕರರ ಸಂಘ ಬೆಂಬಲ ಘೋಷಿಸಿದೆ.

ದ್ವಿತೀಯ ಪಿಯು ಪರೀಕ್ಷೆ ಮೌಲ್ಯಮಾಪಕರ ಬಹಿಷ್ಕಾರ ಹೋರಾಟದಲ್ಲಿ ನೌಕರರ ಸಂಘ ಭಾಗವಹಿಸಲಿದೆ ಎಂದು ಸಂಘದ ಅಧ್ಯಕ್ಷ ಡಾ.ಎಸ್.ಹರೀಶ್, ಗೌರವ ಅಧ್ಯಕ್ಷ ಡಾ.ಆರ್.ಕೃಷ್ಣಮೂರ್ತಿ,ಪ್ರಧಾನ ಕಾರ್ಯದರ್ಶಿ ಎಂ.ಆನಂದ್ ತಿಳಿಸಿದ್ದಾರೆ.

ಮಾರಸಂದ್ರ ಪಿ.ಕೆ.ಬಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗಳ ನಿಯಂತ್ರಣ ಮತ್ತು ಜವಾಬ್ದಾರಿಯನ್ನು ಜಿಲ್ಲಾ ಪಂಚಾಯಿತಿಗೆ ವರ್ಗಾಯಿಸುವ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ರಾಜ್ಯದ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಹೋರಾಟಕ್ಕೆ ಮುಂದಾಗಿದ್ದಾರೆ. ಹೋರಾಟವನ್ನು ತೀವ್ರಗೊಳಿಸಲು ಮಾರ್ಚ್ 20 ರಿಂದ ಆರಂಭವಾಗುವ ದ್ವಿತೀಯ ಪಿಯು ಪರೀಕ್ಷೆಯ ಮೌಲ್ಯಮಾಪನ ಬಹಿಷ್ಕಾರ ಮಾಡಲಾಗುತ್ತಿದೆ ಎಂದರು.

ಪದವಿಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿ, ಉಪನ್ಯಾಸಕರ ಅನುಪಾತ ಕಡಿಮೆ ಮಾಡುವುದು, ಕಾರ್ಯಭಾರದ ಕೊರತೆ ಇರುವ ಅನುದಾನಿತ ಪದವಿ ಕಾಲೇಜುಗಳ ಉಪನ್ಯಾಸಕರನ್ನು ಸಮೀಪದ ಸರ್ಕಾರಿ ಕಾಲೇಜುಗಳಿಗೆ ನಿಯೋಜನೆ ಮಾಡುವುದು ಸೇರಿದಂತೆ ಇತರ ವಿಷಯಗಳ ಬಗ್ಗೆ ಶಿಕ್ಷಣ ಸಚಿವ ಮತ್ತು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಈ ಎಲ್ಲಾ ವಿಷಯಗಳಿಗೂ ಸಚಿವ ಮತ್ತು ಅಧಿಕಾರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದರೂ ಇನ್ನೂ ಆದೇಶ ಹೊರಡಿಸಿಲ್ಲ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260317-15-298704086

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.