ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ: ಪಿಯು ವಿಜ್ಞಾನ ಪ್ರವೇಶಾತಿಗೆ ಅರ್ಜಿ ಆಹ್ವಾನ

Last Updated 27 ಏಪ್ರಿಲ್ 2022, 4:37 IST
ಅಕ್ಷರ ಗಾತ್ರ

ವಿಜಯಪುರ:ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಂದ ಬೊಮ್ಮವಾರದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಉಚಿತ ಸೌಲಭ್ಯದೊಂದಿಗೆ 2022-23ನೇ ಸಾಲಿನಡಿ ವಿಜ್ಞಾನ (ಪಿಸಿಎಂಬಿ–ಪಿಸಿಎಂಸಿ) ವಿಭಾಗದ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಅರ್ಜಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, 10ನೇ ತರಗತಿ ವಾರ್ಷಿಕ ಪರೀಕ್ಷೆಯ ಪ್ರವೇಶ ಪತ್ರದ ಜೆರಾಕ್ಸ್ ಪ್ರತಿ, ಒಂದು ಭಾವಚಿತ್ರ, ವಿಶೇಷ ವರ್ಗದ ಪ್ರಮಾಣ ಪತ್ರಗಳನ್ನು (ಇದ್ದಲ್ಲಿ) ಸಲ್ಲಿಸಬೇಕು ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.

ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಅರ್ಜಿ ಪಡೆದು ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆಪ್ರಾಂಶುಪಾಲರು, ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಮತ್ತು ವಿಜ್ಞಾನ ಕಾಲೇಜು, ಬೊಮ್ಮವಾರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ
ಜಿಲ್ಲೆ ಅಥವಾ ಮೊಬೈಲ್‌ 81055 26933 ಸಂಪರ್ಕಿಸಬಹುದು ಎಂದು ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT