ಶನಿವಾರ, ಅಕ್ಟೋಬರ್ 24, 2020
27 °C

ಬಿಎಸ್‌ಪಿಯಿಂದ ಪುರುಷೋತ್ತಮ್ ಉಚ್ಚಾಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ಬಹುಜನ ಸಮಾಜ ಪಾರ್ಟಿ ರಾಜ್ಯ ಕಾರ್ಯದರ್ಶಿಯಾಗಿದ್ದ ಪುರುಷೋತ್ತಮ್ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಉಚ್ಚಾಟಿಸಲಾಗಿದೆ ಎಂದು ಬಿಎಸ್‌ಪಿ ಕರ್ನಾಟಕ ಉಸ್ತುವಾರಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪುರುಷೋತ್ತಮ್ ನಮ್ಮ ಪಕ್ಷದಲ್ಲಿ ಕಾರ್ಯಕರ್ತನಾಗಿದ್ದರು. ನಮ್ಮ ಪಕ್ಷದಿಂದ ಇವರಿಗೆ ಯಾವುದೇ ಹುದ್ದೆಯನ್ನು ನೀಡಿರಲಿಲ್ಲ. ಆದರೂ ಪುರುಷೋತ್ತಮ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂದು ದೊಡ್ಡಬಳ್ಳಾಪುರ ಸುತ್ತಮುತ್ತ ದೊಡ್ಡಬ್ಯಾನರ್‌ ಮತ್ತು ಪೋಸ್ಟರ್‌ಗಳನ್ನು  ಹಾಕಿಸುತ್ತಿದ್ದಾರೆ. ಬಹುಜನ ಸಮಾಜ ಪಕ್ಷ ರಾಷ್ಟ್ರೀಯ ಪಕ್ಷವಾಗಿದ್ದು, ಇವರು ಪಕ್ಷದ ಶಿಸ್ತಿಗೆ ಬದ್ಧರಾಗಿಲ್ಲ ಮತ್ತು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಈ ಹಿನ್ನೆಲೆಯಲ್ಲಿ ಪುರುಷೋತ್ತಮ್‌ ಅವರನ್ನು ಇಂದಿನಿಂದಲೇ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಸಂಘಟನೆ ಸಹಿಸದವರಿಂದ ಪಿತೂರಿ: ಪಕ್ಷದಿಂದ ಉಚ್ಚಾಟನೆ ಮಾಡುವ ಅಧಿಕಾರ ಉಸ್ತುವಾರಿ ರಾಜ್ಯ ಸಂಯೋಜಕ ಮಾರಸಂದ್ರ
ಮುನಿಯಪ್ಪ ಅವರಿಗೆ ಇಲ್ಲ. ಪಕ್ಷ ಸಂಘಟನೆಗಾಗಿ ಹಲವು ವರ್ಷಗಳಿಂದ ದುಡಿಯುತ್ತಿರುವ ಬಗ್ಗೆ ರಾಜ್ಯ ಘಟಕದ ಅಧ್ಯಕ್ಷರಿಗೆ ಹಾಗೂ
ನಾಯಕಿ ಮಾಯಾವತಿ ಅವರಿಗೆ ತಿಳಿದಿದೆ. ಈ ಪತ್ರಿಕಾ ಹೇಳಿಕೆ ನೀಡಿರುವ ಕ್ರಮದ ವಿರುದ್ದ ಮಾಯಾವತಿಯವರಿಗೆ ಹಾಗೂ ರಾಜ್ಯ ಉಸ್ತುವಾರಿ ಅಶೋಕ್ ಸಿದ್ದಾರ್ಥ ಅವರಿಗೆ ದೂರು ನೀಡಲಾಗುವುದು ಪುರುಷೋತ್ತಮ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು