ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೂಲಿಬೆಲೆ ವಸತಿ ಶಾಲೆಯಲ್ಲಿ ಕ್ವಾರಂಟೈನ್: ಜನರಲ್ಲಿ ಆತಂಕ

Last Updated 19 ಮೇ 2020, 14:19 IST
ಅಕ್ಷರ ಗಾತ್ರ

ಸೂಲಿಬೆಲೆ: ‘ಪಟ್ಟಣದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಸ್ಸಾಂ ಮೂಲದ 7 ಜನರನ್ನು ಕ್ವಾರಂಟೈನ್ ಮಾಡಲಾಗಿದೆ’ ಎಂದು ತಿಳಿದು ಬಂದಿದೆ.

‘ಅಸ್ಸಾಂ ಮೂಲದ 7 ಕಾರ್ಮಿಕರು ನೆರೆಯ ರಾಜ್ಯ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ಇದ್ದವರು. ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸದೇ ಅನಧಿಕೃತವಾಗಿ ಬಂದಿದ್ದಾರೆ. ಇಲ್ಲಿಗೆ ಹೇಗೆ ಬಂದರು ಎಂಬುವುದು ಗೊತ್ತಿಲ್ಲ. ಕಾರ್ಮಿಕರ ಶೆಡ್ಡಿನಲ್ಲಿ ಇದ್ದಾರೆ ಎಂಬ ಮಾಹಿತಿ ಮೇಲೆ ಕರೆ ತರಲಾಗಿದೆ. ಜಡಿಗೇನಹಳ್ಳಿ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಗೆ ಸ್ಥಳವಕಾಶ ಇಲ್ಲದ ಕಾರಣ ಸೂಲಿಬೆಲೆ ಮೊರಾರ್ಜಿ ವಸತಿ ಶಾಲೆಯಲ್ಲಿ 7 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು ಸಂಜೆಗೆ ಮತ್ತಿಬ್ಬರನ್ನು ಕ್ವಾರಂಟೈನ್ ಮಾಡಲಾಗುವುದು’ ಎಂದು ತಾಲ್ಲೂಕು ವೈದ್ಯಾಧಿಕಾರಿ ಮಂಜುನಾಥ್ ತಿಳಿಸಿದರು.

ಜನರಲ್ಲಿ ಆತಂಕ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 6 ಕೊರೊನಾ ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಈಗ ಎಲ್ಲರೂ ಗುಣಮುಖರಾಗಿದ್ದಾರೆ. ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆ ಕೊರೊನಾ ಮುಕ್ತವಾಗಿರುವುದರಿಂದ ಜನರು ಸ್ವಲ್ಪ ನಿರಾಳವಾಗಿದ್ದರು. ಆದರೆ ಈಗ ಹೊರ ರಾಜ್ಯದ ಜನರನ್ನು ಸೂಲಿಬೆಲೆ ಪಟ್ಟಣದಲ್ಲಿರುವ ವಸತಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಿರುವುದರಿಂದ ಸ್ಥಳೀಯರು ಆತಂಕವನ್ನು ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT