ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ವಾರಂಟೈನ್: ಪ್ರತ್ಯೇಕ ಶೌಚಾಲಯ ಕಡ್ಡಾಯ

Last Updated 17 ಮೇ 2020, 16:49 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ‘ಕ್ವಾರಂಟೈನ್‌ ಮಾಡುವ ಸ್ಥಳದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಬಳಕೆ ಮಾಡುವ ಶೌಚಾಲಯವನ್ನು ಬಳಸುವಂತಿಲ್ಲ’ ಎಂದು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವಕೀಲ ಜಿ.ವೆಂಕಟೇಶ್ ತಿಳಿಸಿದ್ದಾರೆ.

‘ಹೈಕೋರ್ಟ್‌ಗೆ ತಾವು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪುರಸ್ಕರಿಸಿ ಈ ನಿರ್ದೇಶನ ನೀಡಲಾಗಿದೆ’ ಎಂದರು.

‘ಕ್ವಾರಂಟೈನ್ ಸಂದರ್ಭದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಬಳಸುವ ಶೌಚಾಲಯಗಳನ್ನು ಬಳಸಿದರೆ ಕೊರೊನಾ ವೈರಸ್ ಸೋಂಕು ಹರಡುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಅರ್ಜಿಯಲ್ಲಿ ನಮೂದಿಸಲಾಗಿತ್ತು. ಅರ್ಜಿಯನ್ನು ಪರಿಗಣಿಸಿದ ಹೈಕೋರ್ಟ್ ಕ್ವಾರಂಟೈನ್‌ ಸ್ಥಳದಲ್ಲಿ ಪ್ರತ್ಯೇಕ ಶೌಚಾಲಯಗಳು ಇರಬೇಕು. ಒಬ್ಬರಿಗಿಂತ ಹೆಚ್ಚು ಮಂದಿ ಬಳಸುವ ಸಾಮಾನ್ಯ ಶೌಚಾಲಯಗಳನ್ನು ಬಳಸುವಂತಿಲ್ಲ ಎಂದು ಕೋರ್ಟ್ ನಿರ್ದೇಶನ ನೀಡಿದೆ. ಈ ಕುರಿತು ಜಿಲ್ಲಾಧಿಕಾರಿಗೆ ಕೋರ್ಟ್ ಆದೇಶವನ್ನು ಜಾರಿ ಮಾಡುವಂತೆ ನ್ಯಾಯಾಲಯದ ಆದೇಶ ಪ್ರತಿಯನ್ನು ಸೋಮವಾರ ಸಲ್ಲಿಸಲಾಗುವುದು’ ಎಂದರು.

ಈಗ ಕ್ವಾರಂಟೈನ್‌ ಮಾಡಲು ಗುರುತಿಸಲಾಗಿರುವ ಕಲ್ಯಾಣ ಮಂದಿರ, ವಸತಿ ಶಾಲೆಗಳಲ್ಲಿ ಎಲ್ಲಿಯೂ ಸಹ ಪ್ರತ್ಯೇಕ ಶೌಚಾಲಯಗಳ ಸೌಲಭ್ಯಗಳೇ ಇಲ್ಲ. ಹೀಗಾಗಿ ಮೂಲ ಸೌಲಭ್ಯಗಳು ಇರುವ ಸ್ಥಳದಲ್ಲೇ ಕ್ವಾರಂಟೈನ್‌ ಮಾಡಬೇಕು ಎಂದು ಜಿ.ವೆಂಕಟೇಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT