ಆನೇಕಲ್: ಕುಡಿದ ಮತ್ತಿನಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ನಡು ರಸ್ತೆಯಲ್ಲಿಯೇ ಹೊಡೆದಾಡಿಕೊಂಡಿರುವ ಘಟನೆ ತಾಲ್ಲೂಕಿನ ಬನ್ನೇರುಘಟ್ಟದಲ್ಲಿ ಬುಧವಾರ ರಾತ್ರಿ ನಡೆದಿದೆ.
ಬನ್ನೇರುಘಟ್ಟ ಸರ್ಕಲ್‌ನಿಂದ ಉದ್ಯಾನಕ್ಕೆ ಹೋಗುವ ರಸ್ತೆಯಲ್ಲಿ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ನಡೆದಿದೆ. ಸ್ಥಳೀಯರು ಗಲಾಟೆ ಬಿಡಿಸಲು ಮುಂದಾದರೂ ಕೂಡ ಹೊಡೆದಾಟ ಮುಂದುವರಿಸಿದ್ದಾರೆ. ಈ ದೃಶ್ಯಗಳನ್ನು ಸಾರ್ವಜನಿಕರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.