ಮಂಗಳವಾರ, ಏಪ್ರಿಲ್ 7, 2020
19 °C

ಧರಣಿ ಸ್ಥಳಕ್ಕೆ ಭೇಟಿ: ಸಚಿವ ಆರ್.ಅಶೋಕ್ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೊಡ್ಡಬಳ್ಳಾಪುರ: ತಾಲ್ಲೂಕಿಗೆ ಬಿಬಿಎಂಪಿ ಕಸ ತಂದು ಸುರಿಯುತ್ತಿರುವುದನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಸತ್ಯಾಗ್ರಹ ಮಂಗಳವಾರ ವಿಧಾನ ಸಭೆಯಲ್ಲಿ ಸದ್ದು ಮಾಡಿದೆ.

ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ ಅವರು ಇಲ್ಲಿನ ಕಸದ ಸಮಸ್ಯೆ ಕುರಿತು ವಿವರವಾಗಿ ಸಭಾಧ್ಯಕ್ಷರ ಗಮನಕ್ಕೆ ತಂದರು.

ಶಾಸಕರ ಪ್ರಶ್ನೆಗಳಿಗೆ ಉತ್ತರಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್, ಸಂಜೆ ವೇಳೆಗೆ ಧರಣಿ ಸ್ಥಳಕ್ಕೆ ಹಾಗೂ ಕಸ ವಿಲೇವಾರಿ ಘಟಕಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಧರಣಿಯಲ್ಲಿ ಎಲೆರಾಂಪುರದ ಕುಂಚಿಟಿಗರ ಮಠದ ಡಾ.ಹನುಮಂತನಾಥ ಸ್ವಾಮೀಜಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು,ಪತ್ರಕರ್ತರ ಸಂಘ, ಕನ್ನಡಪರ ಸಂಘಟನೆಗಳವರು ಭಾಗವಹಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು