ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿಯ ಶ್ರೀರಾಮನಹಳ್ಳಿ ಗ್ರಾಮದ ರೈತರು ಮುಸುಕಿನಜೋಳ ಬಿತ್ತನೆಗೆ ನೇಗಿಲಿನಿಂದ ಸಾಲುಗಳನ್ನು ಸಿದ್ದ ಮಾಡುವಲ್ಲಿ ನಿರತರಾಗಿರುವುದು
ಜಿಲ್ಲೆಯಲ್ಲಿ ಮೂರು ದಿನಗಳಿಂದ ಬಿತ್ತನೆ ಮಾಡುವಷ್ಟು ಮಳೆ ಬೀಳಲು ಆರಂಭವಾಗಿದೆ. ಜಿಲ್ಲೆಯಲ್ಲಿ ಈಗ ಯೂರಿಯಾ 2,787 ಮೆಟ್ರಿಕ್ ಟನ್ ದಾಸ್ತಾನು ಇದೆ. 2,308 ಮೆಟ್ರಿಕ್ ಟನ್ ಬೇಡಿಕೆ ಇದೆ. ಡಿಎಪಿ 972 ಮೆಟ್ರಿಕ್ ಟನ್ ದಾಸ್ತಾನು ಇದೆ. ಬೇಡಿಕೆ ಇರವುದು 1,036 ಮೆಟ್ರಿಕ್ ಟನ್. ಜಿಲ್ಲೆಯಲ್ಲಿ ಹೆಚ್ಚಿನ ಪ್ರದೇಶದಲ್ಲಿ ರಾಗಿ, ಮುಸುಕಿನಜೋಳ ಬಿತ್ತನೆಯಾಗುತ್ತದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಹೋಬಳಿ ರೈತ ಸಂಪರ್ಕ ಕೇಂದ್ರದಲ್ಲಿ ಬಿತ್ತನೆಗಾಗಿ ರಾಗಿ, ಮುಸುಕಿನ ಜೋಳ ದಾಸ್ತಾನು ಮಾಡಲಾಗಿದೆ.
ಎ.ಬಿ.ಬಸವರಾಜು, ಜಿಲ್ಲಾಧಿಕಾರಿ
ಹೊಸಕೋಟೆ ತಾಲ್ಲೂಕಿನಲ್ಲಿ ಬಿತ್ತನೆ ಕಾರ್ಯವು ಆರಂಭವಾಗುತ್ತಿದ್ದು, ಕೃಷಿ ಚಟುವಟಿಕೆಗಳಿಗೆ ಬೇಕಾದ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳಿಗೆ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಂಡಿದ್ದೇವೆ. ಡಿಎಪಿ ಗೊಬ್ಬರ ಕೊರತೆ ಇಲ್ಲ. ಆದರೆ ನಾವೇ ಮಣ್ಣಿನ ಆರೋಗ್ಯದ ಹಿತದೃಷ್ಠಿಯಿಂದ ಡಿಎಪಿ ಬಳಕೆ ಕಡಿಮೆ ಮಾಡಿ ಎಂದು ರೈತರಿಗೆ ಸಲಹೆ ನೀಡುತ್ತಿದ್ದೇವೆ. ಒಟ್ಟಿನಲ್ಲಿ ಕೃಷಿ ಚಟುವಟಿಕೆಗಳಿಗೆ ಅನುಗುಣವಾಗಿ ನಮ್ಮ ಇಲಾಖೆಯು ಸೂಕ್ತ ಕ್ರಮಗಳನ್ನು ಕೈಗೊಂಡಿದೆ.