ದೇವನಹಳ್ಳಿ: ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಆರಂಭಿಸಿರುವ ರಾಗಿ ಖರೀದಿ ಕೇಂದ್ರಗಳಲ್ಲಿ ಸೋಮವಾರ ರಾಗಿ ಖರೀದಿ ಆರಂಭಗೊಂಡಿದೆ.

ನೋಂದಾಯಿತ ರೈತರು ಸಂಬಂಧಪಟ್ಟ ತಾಲ್ಲೂಕುಗಳ ಖರೀದಿ ಕೇಂದ್ರಗಳಿಗೆ ನಿಯಮಾನುಸಾರ ರಾಗಿ ಮಾರಾಟ ಮಾಡಬಹುದು. ಪ್ರಸ್ತುತ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಮಾಡಲು ಜಿಲ್ಲೆಯ 4 ತಾಲ್ಲೂಕುಗಳಲ್ಲಿ ರಾಗಿ ಖರೀದಿ ಕೇಂದ್ರವನ್ನು ತೆರೆದು, ರಾಗಿ ಬೆಳೆದಿರುವ ರೈತರಿಂದ ನಿಯಮಾನುಸಾರ ಅಗತ್ಯ ದಾಖಲೆಗಳನ್ನು ಪಡೆದು ನೊಂದಾಯಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ ಬಸವರಾಜು ತಿಳಿಸಿದ್ದಾರೆ.

ರಾಗಿ ಖರೀದಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಖರೀದಿ ಏಜೆನ್ಸಿಯಾದ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಖರೀದಿ ಅಧಿಕಾರಿಗಳನ್ನು ಸಂಪರ್ಕಿಸಬಹುದು. ನೆಲಮಂಗಲ ತಾಲ್ಲೂಕು ಖರೀದಿ ಅಧಿಕಾರಿ ವೈ.ಎಸ್ ನಾರಾಯಣಮೂರ್ತಿ (9482991630), ದೊಡ್ಡಬಳ್ಳಾಪುರ ತಾಲ್ಲೂಕು ಖರೀದಿ ಅಧಿಕಾರಿ ಎಚ್.ಎನ್ ನಾರಾಯಣ್(9886141435), ದೇವನಹಳ್ಳಿ ತಾಲ್ಲೂಕು ಖರೀದಿ ಅಧಿಕಾರಿ ಎಂ.ಅಚ್ಯೂತ್(9900136687), ಹೊಸಕೋಟೆ ತಾಲ್ಲೂಕು ಖರೀದಿ ಅಧಿಕಾರಿ ಲಕ್ಷ್ಮೀ ನಾರಾಯಣ (9880700975).

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.