ಆನೇಕಲ್: ಬೊಮ್ಮಸಂದ್ರದಲ್ಲಿ ರಾಜಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಿ ಲಕ್ಷಾಂತರ ರೂಪಾಯಿ ಬಾಡಿಗೆ ಪಡೆಯುತ್ತಿದ್ದ ಮನೆಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಸೋಮವಾರ ವಶಪಡಿಸಿಕೊಂಡರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ತೆರವು ಕಾರ್ಯಾಚರಣೆ ನಡೆಸಲಾಯಿತು.

ಬೊಮ್ಮಸಂದ್ರ ಸರ್ವೆ ನಂ. 4, 5, 9, 10, 12, 25, 28ರಲ್ಲಿ ಬೊಮ್ಮಸಂದ್ರ ಕೆರೆಯ ಜಲಮೂಲವಾಗಿರುವ ರಾಜಕಾಲುವೆಯನ್ನು ಮಹಿಳೆಯರೊಬ್ಬರು ಒತ್ತುವರಿ ಮಾಡಿಕೊಂಡು 28 ಮನೆಗಳನ್ನು ನಿರ್ಮಿಸಿದ್ದರು. ಪ್ರತಿ ತಿಂಗಳು₹ 10 ಸಾವಿರದಂತೆ ಬಾಡಿಗೆ ವಸೂಲಿ ಮಾಡುತ್ತಿದ್ದರು.

ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಉಪತಹಶೀಲ್ದಾರ್ ನವೀನ್ ಕುಮಾರ್, ರಾಜಸ್ವ ನಿರೀಕ್ಷಕಕ ಸಂತೋಷ್, ಗ್ರಾಮ ಆಡಳಿತಾಧಿಕಾರಿ ಶಶಿಕುಮಾರ್ ರಾಜಕಾಲುವೆಯ ಒತ್ತುವರಿಯನ್ನು ತೆರವು ಮಾಡಿದ್ದಾರೆ.

ಭೂಗಳ್ಳರು ರಾಜಕಾಲುವೆಯನ್ನು ಒತ್ತುವರಿ ಮಾಡಿ ಮನೆ ನಿರ್ಮಿಸಿದ್ದರು. ಕಂದಾಯ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಜೆಸಿಬಿಯ ಮೂಲಕ ಮನೆ ತೆರವುಗೊಳಿಸಲಾಯಿತು. ಲೋಕಾಯುಕ್ತದಲ್ಲಿಯೂ ಈ ಬಗ್ಗೆ ಪ್ರಕರಣ ದಾಖಲಿಸಲಾಗಿತ್ತು. ರಾಜಕಾಲುವೆಯ ಒತ್ತುವರಿ ತೆರವಿನಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿಯನ್ನು ಉಳಿಸಿದಂತಾಗಿದೆ ಎಂದು ಉಪತಹಶೀಲ್ದಾರ್ ನವೀನ್ ಕುಮಾರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.