ಬುಧವಾರ, ಮಾರ್ಚ್ 29, 2023
23 °C

ರಾಜ್‌ಕುಮಾರ್‌ ಆದರ್ಶ ಪಾಲಿಸಿ: ನಟರಾಜ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ‘ವರನಟ ಡಾ.ರಾಜ್‌ಕುಮಾರ್ ಜನ್ಮ ದಿನದ ಆಚರಣೆಯು ನಿತ್ಯೋತ್ಸವವಾಗಬೇಕಿದೆ’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನಟರಾಜ್ ಎಂ.ಎನ್‌.ಆರ್‌. ಆಶಿಸಿದರು.

ನಗರದ ರೂಪಾ ಹೊಲಿಗೆ ತರಬೇತಿ ಕೇಂದ್ರದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ರಾಜ್‌ಕುಮಾರ್ ಅವರ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.

ಕನ್ನಡ ಚಲನ ಚಿತ್ರರಂಗಕ್ಕೆ ತಮ್ಮ ಜೀವನ ಮುಡುಪಾಗಿಟ್ಟಿದ್ದ ಅವರ ಆದರ್ಶಗಳನ್ನು ನಾವೆಲ್ಲರೂ ಪಾಲಿಸ ಬೇಕಿದೆ ಎಂದು ಸಲಹೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್‌ನ ಹೊಸಕೋಟೆ ತಾಲ್ಲೂಕು ಘಟಕದ ಅಧ್ಯಕ್ಷ ಮುನಿರಾಜು ಮಾತನಾಡಿ, ರಾಜ್‌ಕುಮಾರ್ ಅವರು ರಾಜಕೀಯ ಪ್ರವೇಶ ಮಾಡದೆ ಕನ್ನಡ ಚಿತ್ರರಂಗಕ್ಕಾಗಿ ತಮ್ಮ ಜೀವನ ಮೀಸಲಿಟ್ಟಿದ್ದ ಮಹಾನ್ ನಟ. ಅವರ ಸರಳತೆ ಪ್ರತಿಯೊಬ್ಬರಿಗೂ ಮಾದರಿಯಾಗಿದೆ ಎಂದು ಹೇಳಿದರು. 

ಕಸಾಪ ಮಾಜಿ ಅಧ್ಯಕ್ಷ ಟಿ. ನಾಗರಾಜ್‌, ತಾಲ್ಲೂಕು ಗೌರವ ಕಾರ್ಯದರ್ಶಿ ಬಚ್ಚೇಗೌಡ, ರೂಪಾ ಹೊಲಿಗೆ ಕೇಂದ್ರದ ಸಂಸ್ಥಾಪಕಿ ರೂಪಾ, ಮಂಜುನಾಥ್ ಕಲಾ ಬಳಗದ ಅಧ್ಯಕ್ಷ ರಾಜಣ್ಣ, ಮುಖಂಡರಾದ ಜೆ. ಕೃಷ್ಣಪ್ಪ, ವಾಸುದೇವ, ಮುನಿನಾರಾಯಣಪ್ಪ, ಮುರಳಿ, ಟೆಂಪೊ ವಿಜಯ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು