ಮಂಗಳವಾರ, ಸೆಪ್ಟೆಂಬರ್ 28, 2021
21 °C
ಆರ್‌.ಎಲ್‌. ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಘಟಿಕೋತ್ಸವ

‘ಸವಾಲು ಎದುರಿಸಲು ಸಜ್ಜಾಗಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ಜಾಗತಿಕ ಸವಾಲು ಎದುರಿಸಲು ವಿದ್ಯಾರ್ಥಿಗಳು ಸಜ್ಜಾಗಬೇಕಿದ್ದು, ತಂತ್ರಜ್ಞಾನದ ಆವಿಷ್ಕಾರಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ ಎಂದು ಭಾರತೀಯ ವಿಜ್ಞಾನ ಸಂಸ್ಥೆ ವಿಜ್ಞಾನಿ ಡಾ.ಶಿವಕುಮಾರ್ ಹೇಳಿದರು.

ನಗರದ ಆರ್.ಎಲ್. ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಇಂದು ವಿಜ್ಞಾನ ಮುನ್ನಡೆ ಸಾಧಿಸುತ್ತಿದ್ದು, ಹಲವಾರು ಸಂಶೋಧನೆಗಳು ನಡೆಯುತ್ತಿವೆ. ಪದವಿ ಪಡೆದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಹೊಣೆಗಾರಿಕೆ ಹೆಚ್ಚಾಗಿದೆ. ವಿಜ್ಞಾನದ ಮಹತ್ವವನ್ನು ಜನಸಾಮಾನ್ಯರಿಗೆ ತಲುಪಿಸುವಲ್ಲಿ ಕಾರ್ಯೋನ್ಮುಖವಾಗಬೇಕಿದೆ ಎಂದು
ಹೇಳಿದರು.

ಕಾರ್ಯಕ್ರಮದಲ್ಲಿ ದೇವರಾಜ ಅರಸು ಶಿಕ್ಷಣ ಸಂಸ್ಥೆಯ ನಿರ್ದೇಶಕ ಜೆ. ರಾಜೇಂದ್ರ, ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಬಾಬುರೆಡ್ಡಿ, ಪ್ರಾಂಶುಪಾಲ ಡಾ.ಎಂ. ಶ್ರೀನಿವಾಸರೆಡ್ಡಿ, ಉಪ ಪ್ರಾಂಶುಪಾಲ ಡಾ.ಶಿವಪ್ರಸಾದ್, ಸ್ಟೂಡೆಂಟ್ ವೆಲ್‌ಫೇರ್ ಆಫೀಸರ್ ಡಾ.ಕೆ. ಸುನಿಲ್‌ಕುಮಾರ್ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.