ಆನೇಕಲ್: ರಿಯಲ್ ಎಸ್ಟೇಟ್ ಉದ್ಯಮಿ ಗೋಪಿ ಅವರ ಅಪಹರಣ ಮತ್ತು ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಡಿಜಿಪಿ ಡಾ.ಎಂ.ಎ.ಸಲೀಂ ಆದೇಶಿಸಿದ್ದಾರೆ.

ಗೋಪಿ ಅವರ ಕೊಲೆ ಸಂಬಂಧ ವಿಧಾನಸಭೆ ಅಧಿವೇಶನದಲ್ಲಿ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದಾಗ ಗೃಹ ಸಚಿವ ಪರಮೇಶ್ವರ್ ಅವರು ಸಿಐಡಿ ತನಿಖೆಗೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಡಿಜಿ ಸಲೀಂ ಅವರು ಪ್ರಕರಣದ ತನಿಖಾಧಿಕಾರಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ ನೀಡುವಂತೆ ಸೂಚಿಸಿದ್ದಾರೆ.

ಗೋಪಿ ಕೊಲೆ ಹಿನ್ನೆಲೆಯಲ್ಲಿ ಪ್ರಮುಖ ಸೂತ್ರಧಾರ ಹೊನ್ನಕಳಶಾಪುರ ಗ್ರಾಮದ ಮೋಹನ್ ಬಾಬುನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಮಂಗಳವಾದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಮೋಹನ್ ಬಾಬುನನ್ನು ಪೊಲೀಸರು ಸರ್ಕಾರಿ ಆಸ್ಪತ್ರೆ ಮತ್ತು ನ್ಯಾಯಾಲಯಕ್ಕೆ ಕರೆ ತಂದರು.

ಹೊನ್ನಕಳಶಾಪುರದಲ್ಲಿ ನೀರವ ಮೌನ ಮನೆ ಮಾಡಿತ್ತು. ಗೋಪಿ ಕುಟುಂಬದವರ ರೋಧನ ಮುಗಿಲುಮುಟ್ಟಿತ್ತು. ಮೃತದೇಹ ತಮಿಳುನಾಡಿನ ಡೆಂಕಣಿಕೋಟೆಯಲ್ಲಿ ಸಿಕ್ಕಿದ್ದರಿಂದ ಅಲ್ಲಿನ ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರಿಸಿದರು. ಪೊಲೀಸರ ಬಿಗಿ ಬಂದೋಬಸ್ತ್ನಲ್ಲಿ ಹೊನ್ನಕಳಶಾಪುರದಲ್ಲಿ ಗೋಪಿಯ ಅಂತ್ಯಕ್ರಿಯೆ ನಡೆಯಿತು.

ಕೊಲೆ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಗೋಪಿ ಕುಟುಂಬಸ್ಥರು ಸೋಮವಾರ ಪೊಲೀಸ್ ಠಾಣೆ ಮುಂಭಾಗ ಆಕ್ರೋಶ ವ್ಯಕ್ತಪಡಿಸಿದ್ದರು. ಸೋಮವಾರ ಮರಣೋತ್ತರ ಪರೀಕ್ಷೆಗೂ ತೆರಳದೇ ಆಕ್ರೋಶ ಹೊರಹಾಕಿದ್ದರು. ಮಂಗಳವಾರ ಮರಣೋತ್ತರ ಪರೀಕ್ಷೆ ನಡೆಸಿ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಮೀಸಲು ಪೊಲೀಸ್ ಪಡೆ ಸೇರಿದಂತೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವಿಭಾಗ ವ್ಯಾಪ್ತಿಯ ವಿವಿಧ ಪೊಲೀಸ್ ಠಾಣೆಗಳ ಅಧಿಕಾರಿಗಳು ಸ್ಥಳದಲ್ಲಿ ಬಂದೋಬಸ್ತ್ ಕೈಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.