ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಎತ್ತಿನಹೊಳೆ ಯೋಜನೆಗೆ ಪೂರಕವಾಗಿ ಕೆರೆ ಹೂಳು ತೆಗೆಯಿರಿ’

Last Updated 4 ಜೂನ್ 2019, 14:28 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ 10 ಕೆರೆಗಳ ಪುನಶ್ಚೇತನ ಕಾರ್ಯ ನಡೆಯುತ್ತಿದ್ದು, ಎತ್ತಿನಹೊಳೆ ಯೋಜನೆಗೆ ಪೂರಕವಾಗಿ ಕೆರೆಗಳಲ್ಲಿ ಹೂಳು ತೆಗೆದು ಸಜ್ಜುಗೊಳಿಸಬೇಕಿದೆ ಎಂದು ಶಾಸಕ ಟಿ.ವೆಂಕಟರಮಣಯ್ಯ ಹೇಳಿದರು.

ಅವರು ತಾಲ್ಲೂಕಿನ ದೊಡ್ಡತುಮಕೂರು ಕೆರೆ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ದೊಡ್ಡತುಮಕೂರು ಕೆರೆ ತಾಲ್ಲೂಕಿನ ಎರಡನೇ ದೊಡ್ಡಕೆರೆಯಾಗಿದ್ದು ಐತಿಹಾಸಿಕ ಮಹತ್ವ ಹೊಂದಿದೆ. ಇಂತಹ ಕೆರೆಗೆ ಪುನಶ್ಚೇತನ ನೀಡಬೇಕಾಗಿದೆ. ಈ ಕೆರೆ ಮೂಲಕವೇ ಹೆಸರಘಟ್ಟ ಕೆರೆಗೆ ಎತ್ತಿನಹೊಳೆ ನೀರು ಸಾಗಬೇಕಿದೆ. ಸಮ್ಮಿಶ್ರ ಸರ್ಕಾರದಲ್ಲಿ ಕುಡಿಯುವ ನೀರಿಗೆ ಆದ್ಯತೆ ನೀಡಲಾಗುತ್ತಿದೆ. ಕೆರೆ ಕಾಮಗಾರಿಗೆ ಸಮುದಾಯದ ಸಹಕಾರ ಅಗತ್ಯ ಎಂದರು.

ದೊಡ್ಡತುಮಕೂರು ಗ್ರಾಮದ ಯುವ ಮುಖಂಡ ಟಿ.ಜಿ.ಮಂಜುನಾಥ್ ಮಾತನಾಡಿ, ಶಾಸಕರ ಅನುದಾನದಲ್ಲಿ ಅಭಿವೃದ್ಧಿ ಕೆಲಸಗಳು ನಡೆದಿದೆ ಎಂದರು.

ಮಾರಸಂದ್ರ ಪಿಕೆಬಿ ಶಾಲೆ ಸಮೀಪದ ರಸ್ತೆ ಕಾಮಗಾರಿ ತ್ವರಿತವಾಗಿ ನಡೆಯಬೇಕಿದೆ. ಕೆರೆ ಏರಿ ರಸ್ತೆ ಕಾಮಗಾರಿ ಒಂದು ವರ್ಷದಿಂದ ನಡೆಯುತ್ತಿದ್ದು, ಗ್ರಾಮಸ್ಥರಿಗೆ ತೊಂದರೆಯಾಗಿದೆ ಎಂದು ತಿಳಿಸಿದರು.

ಅನಾಥಾಶ್ರಮ ಹಾಗೂ ವೃದ್ಧಾಶ್ರಮಗಳಿಗೆ ನಿವೇಶನ ನೀಡಬೇಕೆಂದು ಗ್ರಾಮದ ಎಚ್.ನಾಗರಾಜು ಮನವಿ ಮಾಡಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಜಿ.ಚುಂಚೇಗೌಡ, ಉಪವಿಭಾಗಾಕಾರಿ ಸಿ.ಮಂಜುನಾಥ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಮೀನಾಕ್ಷಿ ಕೆಂಪಣ್ಣ, ದೊಡ್ಡತುಮಕೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹರಾಜು, ಉಪಾಧ್ಯಕ್ಷ ರವಿಕುಮಾರ್, ಮುಖಂಡರಾದ ಮುನಿರಾಜಪ್ಪ, ಸರಸ್ವತಮ್ಮ, ವೆಂಕಟೇಶ್, ಚಿಕ್ಕಣಪ್ಪ, ಮುನಿರಾಜಪ್ಪ, ಆರ್ ನಾಗರಾಜು, ಎ.ನಾಗರಾಜು, ವಿಜಯಕುಮಾರ್, ಟಿ.ಎನ್.ನಾಗರಾಜು, ಯಲ್ಲಪ್ಪ, ಇ.ರಾಮಕೃಷ್ಣಪ್ಪ, ಲೋಕೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT