ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಮಕ್ಕಳ ಅಭಿವೃದ್ಧಿಗೆ ಮಳಿಗೆಗಳ ಬಾಡಿಗೆ ಹಣ ’

Last Updated 26 ಮೇ 2019, 13:35 IST
ಅಕ್ಷರ ಗಾತ್ರ

ದೇವನಹಳ್ಳಿ: ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನಿರ್ಮಾಣ ಮಾಡಿರುವ ವಾಣಿಜ್ಯ ಮಳಿಗೆಗಳ ಬಾಡಿಗೆ ಹಣವನ್ನು ಬಡಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಉಪಯೋಗಿಸಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮಂತರಾಯಪ್ಪ ತಿಳಿಸಿದರು.

ಇಲ್ಲಿನ ಹಳೆ ತಾಲ್ಲೂಕು ಕಚೇರಿ ಮುಂಭಾಗ ನೌಕರರ ಸಂಘದ ವತಿಯಿಂದ ನಿರ್ಮಾಣಗೊಂಡಿರುವ ಐದು ವಾಣಿಜ್ಯ ಮಳಿಗೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

₹ 25 ಲಕ್ಷ ವೆಚ್ಚದಲ್ಲಿ ಮಳಿಗೆಗಳನ್ನು ನಿರ್ಮಾಣ ಮಾಡಲಾಗಿದೆ. ನೌಕರರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ವಾರ್ಷಿಕವಾಗಿ ನಡೆಯುವ ರಾಷ್ಟ್ರೀಯ ಹಬ್ಬಗಳ ಆಚರಣೆಗೆ ತಲಾ ₹10 ಸಾವಿರ, ನಿವೃತ್ತ ನೌಕರರಿಗೆ ಸನ್ಮಾನ, ವಿವಿಧ ಸ್ಪರ್ಧೆಯಲ್ಲಿ ವಿಜೇತ ಕ್ರೀಡಾ ಸಾಧಕ ನೌಕರರಿಗೆ ಅಭಿನಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಉಪವಿಭಾಗಾಧಿಕಾರಿ ಮಂಜುನಾಥ್‌ ಮಾತನಾಡಿ, ಸಂಘಟನೆಯ ಬಲದಿಂದ ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಹೋರಾಟ ನ್ಯಾಯಯುತವಾಗಿರಬೇಕು. ದೇವನಹಳ್ಳಿ ಸರ್ಕಾರಿ ನೌಕರರ ಸಂಘ ಮಾದರಿಯಾಗಿದೆ. ಪ್ರತಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಂಘದ ಸಂಪನ್ಮೂಲ ಕ್ರೋಡೀಕರಣಕ್ಕೆ ಮುಂದಾದರೆ ಅನೇಕ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಕಂದಾಯ ಇಲಾಖೆ ನೌಕರರ ಸಂಘ ರಾಜ್ಯ ಘಟಕ ಅಧ್ಯಕ್ಷ ವಿಜಯಕುಮಾರ್‌, ಪ್ರಧಾನ ಕಾರ್ಯದರ್ಶಿ ಮಾಲ್ತೇಶ್‌ ಅಣ್ಣಿಗೇರಿ, ಹಿರಿಯ ಉಪಾಧ್ಯಕ್ಷ ಆಂಜಿನಪ್ಪ, ಜಿಲ್ಲಾ ಘಟಕ ಅಧ್ಯಕ್ಷ ಶಿವರಾಜು, ಕಂದಾಯ ಇಲಾಖೆ ನೌಕರರ ಸಂಘ ರಾಜ್ಯ ಘಟಕ ಸಂಘಟನಾ ಕಾರ್ಯದರ್ಶಿ ಎಚ್‌. ಬಾಲಕೃಷ್ಣ, ನೆಲಮಂಗಲ ತಾಲ್ಲೂಕು ಘಟಕ ಅಧ್ಯಕ್ಷ ವಾಸುದೇವಮೂರ್ತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ರಾಜ್ಯ ಘಟಕ ಉಪಾಧ್ಯಕ್ಷ ವೆಂಕಟಾಚಲ, ತಾಲ್ಲೂಕು ಘಟಕ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌, ಉಪಾಧ್ಯಕ್ಷ ಆಂಜಿನಪ್ಪ, ಗೋವಿಂದರಾಜು, ಸಂಘಟನಾ ಕಾರ್ಯದರ್ಶಿ ಪ್ರಭಾಕರ್‌ ರಾಜ್ಯ ಘಟಕದ ಉಪಾಧ್ಯಕ್ಷ ರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT