ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಗಮಕ್ಕೆ ಪಿಳ್ಳಮುನಿಶಾಮಪ್ಪ ನೇಮಕಕ್ಕೆ ಮನವಿ

ಎಚ್‌.ಡಿ.ದೇವೇಗೌಡರಿಗೆ ಮನವಿ ಪತ್ರ ಸಲ್ಲಿಸಿದ ಜೆಡಿಎಸ್‌ ಮುಖಂಡರು
Last Updated 17 ಜನವರಿ 2019, 13:44 IST
ಅಕ್ಷರ ಗಾತ್ರ

ವಿಜಯಪುರ: ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷ ಅಸ್ತಿತ್ವದ ಉಳಿವಿಗಾಗಿ ನಿರಂತರವಾಗಿ ಶ್ರಮಿಸಿದ್ದ ಎಡಗೈ ಸಮುದಾಯದ ಮಾಜಿ ಶಾಸಕ ಪಿಳ್ಳಮುನಿಶಾಮಪ್ಪ ಅವರಿಗೆ ನಿಗಮ ಅಥವಾ ಮಂಡಳಿಯಲ್ಲಿ ಅವಕಾಶ ಮಾಡಿಕೊಡಬೇಕು ಎಂದು ಮುಖಂಡರು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಬೆಂಗಳೂರಿನ ದೇವೇಗೌಡರ ಮನೆಯಲ್ಲಿ ಮನವಿ ಪತ್ರ ಸಲ್ಲಿಸಿ ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಹನುಮಂತಪ್ಪ ಮಾತನಾಡಿ, ದೇವನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ 2013 ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ಆಯ್ಕೆಯಾಗುವ ಮೂಲಕ ಜೆಡಿಎಸ್ ಪಕ್ಷವನ್ನು ಉತ್ತಮವಾಗಿ ಸಂಘಟಿಸುವ ಮೂಲಕ ಕ್ಷೇತ್ರದಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಪಕ್ಷವನ್ನು ಮತ್ತಷ್ಟು ಸದೃಢವಾಗಿ ಮಾಡಿದ್ದಾರೆ ಎಂದು ವಿವರಿಸಿದರು.

2018ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಸಹಕಾರ ಕೊಟ್ಟಿದ್ದಾರೆ. ಅವರು ಬೇರೆ ಯಾವುದೇ ಪಕ್ಷದ ಕಡೆಗೆ ಮುಖ ಮಾಡಿಲ್ಲ, ಆದ್ದರಿಂದ ಮೈತ್ರಿ ಸರ್ಕಾರದಲ್ಲಿ ಅವರಿಗೆ ನಿಗಮ ಮಂಡಳಿಯಲ್ಲಿ ಅವಕಾಶ ಮಾಡಿಕೊಟ್ಟು ಸಮುದಾಯಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.

ಮುಖಂಡ ಹ್ಯಾಡ್ಯಾಳ ದೇವರಾಜ್ ಮಾತನಾಡಿ, ಪಕ್ಷದ ಸಂಘಟನೆಯ ಹಿತದೃಷ್ಟಿಯಿಂದ ಸಮುದಾಯದ ಪಿಳ್ಳಮುನಿಶಾಮಪ್ಪ ಅವರಿಗೆ ನಿಗಮ ಅಥವಾ ಮಂಡಳಿಯಲ್ಲಿ ಅವಕಾಶ ಮಾಡಿಕೊಡಬೇಕು ಎಂದರು.

ಮುಖಂಡ ಮುದುಗುರ್ಕಿ ಆಂಜಿನಪ್ಪ ಮಾತನಾಡಿ, ಎಡಗೈ ಸಮುದಾಯದ ಜನಾಂಗದವರು ಪಕ್ಷ ನಿಷ್ಠೆಯಿಂದ ಗೆಲುವಿಗಾಗಿ ಕೆಲಸ ಮಾಡಿದ್ದೇವೆ. ಪಕ್ಷವನ್ನೂ ಸಂಘಟನೆ ಮಾಡಿದ್ದು, ಮುಂದೆಯೂ ಮಾಡುತ್ತೇವೆ. ಚುನಾವಣೆಯ ಪೂರ್ವದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಬೇಕೆನ್ನುವ ಒಂದೇ ಉದ್ದೇಶದಿಂದ ಪಿಳ್ಳಮುನಿಶಾಮಪ್ಪ ಅವರು ಶಾಸಕರಾಗುವ ಅವಕಾಶವಿದ್ದರೂ ತ್ಯಾಗಮಾಡಿ ಪಕ್ಷಕ್ಕಾಗಿ ದುಡಿದಿದ್ದಾರೆ. ಅವರನ್ನು ಗುರುತಿಸಬೇಕು ಎಂದು ಮನವಿ ಮಾಡಿದರು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮಾತನಾಡಿ, ಜೆಡಿಎಸ್, ಎಲ್ಲ ಸಮುದಾಯಗಳನ್ನು ಒಟ್ಟುಗೂಡಿಸಿಕೊಂಡು ಹೋಗುವ ಪಕ್ಷವಾಗಿದ್ದು, ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಉತ್ತಮ ಪಡಿಸಿರುವ ನಾಯಕರನ್ನು ಕೈ ಬಿಡುವ ಪ್ರಶ್ನೆಯೇ ಇಲ್ಲ. ಪಕ್ಷದ ತಳಮಟ್ಟದ ಕಾರ್ಯಕರ್ತರನ್ನೂ ಗುರ್ತಿಸುತ್ತೇವೆ ಎಂದು ಭರವಸೆ ನೀಡಿದರು.

ಮುಖಂಡರಾದ ಹರಳೂರು ಮುನಿಯಪ್ಪ, ಅನಿಲ್ ಯಾದವ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT