ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಡಗೈ ಸಮುದಾಯಕ್ಕೆ ಅವಕಾಶ: ಒತ್ತಾಯ

Last Updated 8 ಜೂನ್ 2020, 14:50 IST
ಅಕ್ಷರ ಗಾತ್ರ

ವಿಜಯಪುರ: ದೇವನಹಳ್ಳಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಪರಿಶಿಷ್ಟ ಜಾತಿ ಎಡಗೈ ಸಮುದಾಯದ ಸ್ಥಳೀಯರಿಗೆ ಅವಕಾಶ ನೀಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡುವುದಾಗಿ ಕಾಂಗ್ರೆಸ್ ಮುಖಂಡ ಎಂ.ನಾರಾಯಣಸ್ವಾಮಿ ತಿಳಿಸಿದರು.

ಚನ್ನರಾಯಪಟ್ಟಣ ಹೋಬಳಿ ಚನ್ನಹಳ್ಳಿ ಸಮೀಪದ ಫಾರ್ಮ್‌ಹೌಸ್‌ನಲ್ಲಿ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣದ ಹಿನ್ನೆಲೆಯಲ್ಲಿ ಸಮುದಾಯದ ಮುಖಂಡರ ಸಭೆ ನಡೆಸಿದ ಅವರು, ‘ಪಕ್ಷದಲ್ಲಿ ನಿಷ್ಠೆಯಿಂದ ದುಡಿಯುತ್ತಿರುವ ಹಲವಾರು ಮಂದಿ ಸಮುದಾಯದ ಮುಖಂಡರಿದ್ದೇವೆ. ಪ್ರತಿ ಚುನಾವಣೆಯಲ್ಲೂ ನಮ್ಮ ಸಮುದಾಯಕ್ಕೆ ಅವಕಾಶ ನೀಡಬೇಕು ಎಂದು ಪದೇ ಪದೇ ಮನವಿ ಮಾಡುತ್ತಲೇ ಇದ್ದೇವೆ. ನಮ್ಮ ಸಮುದಾಯದ ಕೂಗನ್ನು ಕಾಂಗ್ರೆಸ್ ನಾಯಕರು ಇದುವರೆಗೂ ಆಲಿಸಿಲ್ಲ’ ಎಂದರು.

ಮುಖಂಡ ಬುಳ್ಳಹಳ್ಳಿ ರಾಜಪ್ಪ ಮಾತನಾಡಿ, ‘ದೇವನಹಳ್ಳಿ ಮೀಸಲು ಕ್ಷೇತ್ರದಲ್ಲಿ ಬಲಗೈ, ಭೋವಿ, ಸಮುದಾಯಕ್ಕೆ ಅವಕಾಶ ನೀಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿರುವ ಎಡಗೈ ಸಮುದಾಯಕ್ಕೆ ಪಕ್ಷದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಇದು ಜನಾಂಗಕ್ಕೆ ಮಾಡಿದ ಮೋಸವಾಗಿದೆ. ಈ ಬಾರಿ ಸ್ಥಳೀಯ ಎಡಗೈ ಸಮುದಾಯವರಿಗೆ ಕೊಡಬೇಕು ಎನ್ನುವುದು ಕ್ಷೇತ್ರದ ಜನರ ವಾದವಾಗಿದ್ದು, ಇದನ್ನು ಪಕ್ಷದ ಹಿರಿಯ ನಾಯಕರು ಅರ್ಥ ಮಾಡಿಕೊಳ್ಳುತ್ತಾರೆ ಎನ್ನುವ ನಂಬಿಕೆಯಿದೆ’ ಎಂದರು.

ಮುಖಂಡ ಚಂದೇನಹಳ್ಳಿ ಮುನಿಯಪ್ಪ ಮಾತನಾಡಿ, ‘ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ, ವಿಧಾನಸಭೆ ಸೇರಿದಂತೆ ಎಲ್ಲಾ ಕಡೆಗಳಲ್ಲಿ ನಮ್ಮನ್ನು ಕಡೆಗಣಿಸಲಾಗುತ್ತಿದೆ. ನಮ್ಮ ಸಮುದಾಯದವರು ಸಂಘಟಿತರಾಗಬೇಕಾಗಿದೆ. ಪ್ರತಿ ಚುನಾವಣೆಯಲ್ಲೂ ನಮ್ಮ ಸಮುದಾಯಕ್ಕೆ ಅವಕಾಶ ಮಾಡಿಕೊಡುವುದಾಗಿ ಭರವಸೆ ನೀಡುತ್ತಲೇ ನಮಗೆ ಮೋಸ ಮಾಡುತ್ತಿದ್ದಾರೆ. ನಾವು ಒಗ್ಗಟ್ಟಿನಿಂದ ಹೋರಾಟ ಮಾಡಿದಾಗ ಮಾತ್ರವೇ ನಾವು ನ್ಯಾಯ ಪಡೆಯಲಿಕ್ಕೆ ಸಾಧ್ಯವಾಗುತ್ತದೆ’ ಎಂದರು. ಮುಖಂಡರಾದ ಮುದುಗುರ್ಕಿ ನಾರಾಯಣಸ್ವಾಮಿ, ಕೃಷ್ಣಮೂರ್ತಿ, ಭಟ್ರೇನಹಳ್ಳಿ ನಾರಾಯಣಪ್ಪ, ಗೊಡ್ಲುಮುದ್ದೇನಹಳ್ಳಿ ಮುನಿರಾಜು, ನರಸಿಂಹಪ್ಪ (ಭಾಷಾ), ಪ್ರಕಾಶ್, ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT