ದೊಡ್ಡಬಳ್ಳಾಪುರ: ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಇರುವ ಗರಿಷ್ಠ ಎಕರೆಗೆ 20 ಕ್ವಿಂಟಾಲ್ ಮಿತಿಯನ್ನು ತೆಗೆದುಹಾಕಿ ಮೊದಲಿನಂತೆ ಗರಿಷ್ಠ 50 ಕ್ವಿಂಟಾಲ್ಗೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ಸೋಮವಾರ ನಗರದ ಎಪಿಎಂಸಿ ಆವರಣದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ರಾಗಿ ಖರೀದಿ ಕೇಂದ್ರದ ಮುಂದೆ ಪ್ರತಿಭಟನೆ ನಡೆಸಿದರು.

ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರಾಗಿ ಖರೀದಿ ಕೇಂದ್ರದಲ್ಲಿ ಹೆಸರು ನೋಂದಾಯಿಸಿಲು ಬೆಳಿಗ್ಗೆ 5 ಗಂಟೆಯಿಂದಲೇ ರೈತರು ಸಾಲುಗಟ್ಟಿ ನಿಂತಿದ್ದರು. ನಂತರ ಖರೀದಿ ಕೇಂದ್ರದ ನೋಂದಣಿ ಆರಂಭವಾಗುತ್ತಿದ್ದಂತೆ ಆಗಮಿಸಿದ ರೈತ ಮುಖಂಡರು, ‘ಸರ್ಕಾರ ಕೂಡಲೇ ಯಾವುದೇ ಮಿತಿ ವಿಧಿಸದೆ ರಾಗಿ ಖರೀದಿ ನಡೆಸಬೇಕು. ಒಮ್ಮೆ ಖರೀದಿ ನೋಂದಣಿ ಆರಂಭ
ವಾದರೆ ಮತ್ತೆ ತಂತ್ರಾಂಶದಲ್ಲಿ ತಿದ್ದುಪಡಿಯಾಗುವುದಿಲ್ಲ. ಈ ಪ್ರಕ್ರಿಯೆ ಆರಂಭವಾಗುವ ಮುನ್ನವೇ ಮಿತಿ ತೆಗೆದುಹಾಕ
ಬೇಕು’ ಎಂದು ಒತ್ತಾಯಿಸಿದರು.

ಸ್ಥಳಕ್ಕೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಭೇಟಿ ನೀಡಿ ಸಮಸ್ಯೆ ಬಗೆಹರಿಸಬೇಕು ಎಂದು ರೈತರು ಪಟ್ಟುಹಿಡಿದರು.

ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ಪ್ರಸನ್ನ, ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಬಚ್ಚಹಳ್ಳಿ ಸತೀಶ್ ಮಾತನಾಡಿ, ‘ರಾಜ್ಯದಲ್ಲಿಯೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅತಿ ಹೆಚ್ಚು ರಾಗಿ ಬೆಳೆಯುವ ಪ್ರದೇಶವಾಗಿದೆ. ತಾಲ್ಲೂಕಿನಲ್ಲಿ ಹೆಚ್ಚಿನ ರೈತರು ರಾಗಿ ಬೆಳೆದಿದ್ದಾರೆ. ಆದರೆ ಸರ್ಕಾರ ಈ ಬಾರಿ ರಾಗಿ ಪ್ರತಿ ಕ್ವಿಂಟಾಲ್ಗೆ ₹3,377 ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ಎಕರೆಗೆ 10 ಕ್ವಿಂಟಾಲ್ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಮಾತ್ರ ಖರೀದಿಸಲು ಆದೇಶಿಸಿರುವುದು ಅವೈಜ್ಞಾನಿಕ ಕ್ರಮವಾಗಿದೆ’ ಎಂದು ದೂರಿದರು.

‘ಸರ್ಕಾರದ ಆದೇಶದಂತೆ ಇತ್ತೀಚಿನ ವರ್ಷಗಳಲ್ಲಿ ನೀಲಗಿರಿ ಮರಗಳನ್ನು ತೆರವು ಮಾಡಿರುವ ರೈತರು, ಆ ಪ್ರದೇಶದಲ್ಲಿ ರಾಗಿ ಬೆಳೆದಿದ್ದಾರೆ. ಈಗ ಖರೀದಿ ಮಿತಿ ವಿಧಿಸಿದರೆ ಹೇಗೆ? ಹೆಚ್ಚು ರಾಗಿ ಬೆಳೆದ ರೈತರು ಅನಿವಾರ್ಯವಾಗಿ ಮಧ್ಯವರ್ತಿಗಳು ನೀಡಿದ ಬೆಲೆಗೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಒಮ್ಮೆ ಖರೀದಿ ನೋಂದಣಿ ಆರಂಭವಾದರೆ ಮತ್ತೆ ಫ್ರೂಟ್ ತಂತ್ರಾಂಶದಲ್ಲಿ ತಿದ್ದುಪಡಿಯಾಗುವುದಿಲ್ಲ. ಇದರಲ್ಲಿಯೂ ತಾಂತ್ರಿಕ ದೋಷಗಳಿದ್ದು, ರೈತರ ಎರಡು ಮೂರು ಪಹಣಿಯಲ್ಲಿ ಕಡಿಮೆ ಜಮೀನಿನ ಪಹಣಿ ಮಾತ್ರ ನೋಂದಣಿಗೆ ತೆಗೆದುಕೊಳ್ಳಲಾಗುತ್ತಿದ್ದು, ಸರ್ಕಾರ ಕೂಡಲೇ ರಾಗಿ ಖರೀದಿ ಮಿತಿಯನ್ನು ತೆಗೆದು ಮೊದಲಿನಂತೆ ಎಕರೆಗೆ ಗರಿಷ್ಠ 50 ಕ್ವಿಂಟಾಲ್ಗೆ ನಿಗದಿಪಡಿಸಬೇಕು. ರಾಗಿಯನ್ನು ಯಾವುದೇ ಕಾರಣಕ್ಕೂ ತಿರಸ್ಕರಿಸಬಾರದು’ ಎಂದರು.

ಕೃಷಿಕ ಸಮಾಜದ ಉಪಾಧ್ಯಕ್ಷ ಜಯರಾಮಣ್ಣ ಮಾತನಾಡಿ, ‘ಸರ್ಕಾರ ಅವೈಜ್ಞಾನಿಕ ರಾಗಿ ಖರೀದಿ ಬಗ್ಗೆ ರೈತರು ದನಿ ಎತ್ತಬೇಕಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತರಲಾಗಿದೆ. ಪ್ರತಿ ಹೋಬಳಿಯಲ್ಲಿಯೂ ರಾಗಿ ಖರೀದಿ ಕೇಂದ್ರ ತೆರೆಯಲು ಒತ್ತಾಯಿಸಲಾಗುತ್ತಿದೆ. ಇನ್ನೂ ಸಾಕಷ್ಟು ಕಾಲವಕಾಶವಿದ್ದು ರೈತರು ಯಾವುದೇ ಆತಂಕಕ್ಕೆ ಒಳಗಾಗಬೇಕಿಲ್ಲ. ಬೆಳಗಿನ ಜಾವವೇ ಬಂದು ಸಾಲುಗಟ್ಟಿ ನಿಲ್ಲಬೇಕಿಲ್ಲ’ ಎಂದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ಹನುಮೇಗೌಡ, ಮುಖಂಡರಾದ ಹರೀಶ್, ಶಿರವಾರ ರವಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.