ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದೇವನಹಳ್ಳಿ: ಇಬ್ಬರು ಬಾಲಕಾರ್ಮಿಕರ ರಕ್ಷಣೆ

Published 6 ಜೂನ್ 2024, 15:37 IST
Last Updated 6 ಜೂನ್ 2024, 15:37 IST
ಅಕ್ಷರ ಗಾತ್ರ

ದೇವನಹಳ್ಳಿ: ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಾಲ ಕಾರ್ಮಿಕರನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಗ್ರಾಮದಲ್ಲಿ ರಕ್ಷಿಸಲಾಗಿದೆ.

ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿ ಮೂಡಿಸಲಾಯಿತು. ರಕ್ಷಿಸಲಾದ ಮಕ್ಕಳನ್ನು ತಾತ್ಕಾಲಿಕ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿದೆ.

ತನಿಖಾ ಕಾರ್ಯಾಚರಣೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಎಚ್.ಆರ್, ಜಿಲ್ಲಾ ಬಾಲಕಾರ್ಮಿಕ ಯೋಜನೆ ನಿರ್ದೇಶಕ ಸುಬ್ಬಾರಾವ್ ಎಸ್‌.,ಕಾರ್ಮಿಕ ನಿರೀಕ್ಷಕ ದಯಾನಂದ ಸಾಗರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ರಶ್ಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಶ್ರೀಧರ್ ಹಾಗೂ ಮಕ್ಕಳ ಸಹಾಯವಾಣಿ ಸಿಬ್ಬಂದಿ ಶ್ರೀನಿವಾಸ, ಸೌಮ್ಯ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT