ಬುಧವಾರ, ಆಗಸ್ಟ್ 17, 2022
25 °C

ತಾ. ಪಂ.ಅಧ್ಯಕ್ಷೆ ರಾಜೀನಾಮೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೊಡ್ಡಬಳ್ಳಾಪುರ: ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ರತ್ನಮ್ಮ ಜಯರಾಂ ಸೋಮವಾರ ರಾಜೀನಾಮೆ ಸಲ್ಲಿಸಿದರು.

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ ಅವರು, ಪಕ್ಷದ ವರಿಷ್ಠರು ನೀಡಿದ ಅವಧಿಯಲ್ಲಿ ತಾಲ್ಲೂಕಿನ ಅಭಿವೃದ್ಧಿಗೆ ಸಾಧ್ಯವಾದಷ್ಟು ಕ್ರಮ ಕೈಗೊಳ್ಳಲಾಗಿದೆ ಎಂದರು.

ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲು ಅವಕಾಶ ನೀಡಿ ಸಲಹೆ, ಸಹಕಾರ ನೀಡಿದ ಶಾಸಕ ಟಿ.ವೆಂಕಟರಮಣಯ್ಯ, ಕಾಂಗ್ರೆಸ್‌ ಹಿರಿಯ ಮುಖಂಡ ಆರ್.ಜಿ.ವೆಂಕಟಾಚಲಯ್ಯ, ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್‌ಕುಮಾರ್‌ ಹಾಗೂ ಸದಸ್ಯರಿಗೆ ಧನ್ಯವಾದ ತಿಳಿಸಿದರು.

ಪಕ್ಷದ ಹೈಕಮಾಂಡ್ ನಿಲುವಿಗೆ ಬದ್ದರಾಗಿ ರತ್ನಮ್ಮ ಜಯರಾಂ ರಾಜೀನಾಮೆ ಸಲ್ಲಿಸಿದ್ದು, ತಾಲ್ಲೂಕು ಪಂಚಾಯಿತಿ ಸದಸ್ಯ ನಾರಾಯಣಗೌಡ ಅಧ್ಯಕ್ಷರಾಗುವ ಸಾಧ್ಯತೆ ಇದೆ. ತಾಲ್ಲೂಕು ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಇನ್ನು ಆರು ತಿಂಗಳು ಮಾತ್ರ ಬಾಕಿ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು