ಕಾಲೇಜು ರಜತ ಮಹೋತ್ಸವ ಅ.17 ಮತ್ತು 18 ರಂದು
ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಕೈಗಾರಿಕಾ ತರಬೇತಿ ಸಂಸ್ಥೆಗಳ ಬೆಳ್ಳಿ ಹಬ್ಬ ನಡೆಯಲಿದೆ. ಅ.17 ರಂದು ನಡೆಯುವ ಘಟಿಕೋತ್ಸವದಲ್ಲಿ ವಿಜ್ಞಾನಿ ಐಐಎಸ್ಸಿ ನಿವೃತ್ತ ಪ್ರಾಧ್ಯಾಪಕ ಪ್ರೊ.ಕೆ.ಪಿ.ಜೆ ರೆಡ್ಡಿ ಪಾಲ್ಗೊಳ್ಳಲಿದ್ದಾರೆ. ಅ. 18 ರಂದು ನಡೆಯುವ ಬೆಳ್ಳಿ ಹಬ್ಬದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎಸ್.ವಿದ್ಯಾಶಂಕರ್ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ಭಾಗವಹಿಸಲಿದ್ದಾರೆ. ಸಂಜೆ ಪ್ರಸಿದ್ದ ಗಾಯಕಿ ಅನುರಾಧಾ ಭಟ್ ಹಾಗೂ ಗಾಯಕ ಕಂಬದ ರಂಗಯ್ಯ ತಂಡದಿಂದ ಸಾಂಸ್ಕೃತಿಕ ಸಂಜೆ ನಡೆಯಲಿದೆ.