ದೊಡ್ಡಬಳ್ಳಾಪುರ: ಮಾಜಿ ಕೇಂದ್ರ ಸಚಿವ, ದೇವರಾಜ ಅರಸ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ದಿವಂಗತ ಆರ್.ಎಲ್.ಜಾಲಪ್ಪ ಅವರ 4ನೇ ವರ್ಷದ ಪುಣ್ಯಸ್ಮರಣೆ ಬುಧವಾರ ನಡೆಯಿತು.

ಇಲ್ಲಿನ ಆರ್ಎಲ್ಜೆಐಟಿ ಕ್ಯಾಂಪಸ್ನಲ್ಲಿರುವ ಆರ್.ಎಲ್.ಜಾಲಪ್ಪ ಸ್ಮೃತಿವನದಲ್ಲಿ ಜಾಲಪ್ಪ ಸಮಾಧಿಗೆ ಕುಟುಂಬಸ್ಥರು ಪೂಜೆ ನೆರವೇರಿಸಿದರು.

ಈ ವೇಳೆ ಮಾತನಾಡಿದ ಎಸ್ಡಿಯುಇಟಿ ಉಪಾಧ್ಯಕ್ಷ ಜೆ.ರಾಜೇಂದ್ರ, ನಾಡಿನ ರಾಜಕಾರಣ, ಶಿಕ್ಷಣ, ಸಹಕಾರ ಮತ್ತು ಸಾಮಾಜಿಕ ವಲಯದಲ್ಲಿ ತಮ್ಮದೇ ಆದ ವಿಶಿಷ್ಟ ಛಾಪು ಮೂಡಿಸಿದ್ದ ಜಾಲಪ್ಪ ಅವರು ದೂರದೃಷ್ಟಿ ಹೊಂದಿರುವ ನಾಯಕರಾಗಿದ್ದರು. ಅವರ ಚಿಂತನೆಗಳು ಮತ್ತು ಆದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಅವರ ಆಶಯಗಳಿಗೆ ಪೂರಕವಾಗಿ ಶ್ರೀ ದೇವರಾಜ ಅರಸ್ ಶಿಕ್ಷಣ ಸಂಸ್ಥೆ ವಿನೂತನ ಕಾರ್ಯಯೋಜನೆಗಳನ್ನು ಸಾಕಾರಗೊಳಿಸುತ್ತಿದೆ ಎಂದರು.

ಸಂಸ್ಥೆಯ ಕಾರ್ಯದರ್ಶಿ ಕೆ.ಜಿ.ಹನುಮಂತರಾಜು, ಜಾಲಪ್ಪ ಅವರ ಕುಟುಂಬಸ್ಥರು, ಆರ್.ಎಲ್.ಜಾಲಪ್ಪ ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ಶೈಕ್ಷಣಿಕ ಘಟಕಗಳ ಮುಖ್ಯಸ್ಥರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.