ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೊಡ್ಡಬಳ್ಳಾಪುರದಲ್ಲಿ ಜಾಲಪ್ಪ ಅವರ ಅಂತಿಮ ಯಾತ್ರೆ

Last Updated 18 ಡಿಸೆಂಬರ್ 2021, 9:23 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ಶುಕ್ರವಾರ ನಿಧನರಾದ ಕೇಂದ್ರದ ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಪಾರ್ಥಿವ ಶರೀರದ ಅಂತಿಮ ಯಾತ್ರೆ ನಗರದ ಪ್ರಮುಖ ಬೀದಿಗಳಲ್ಲಿ ಶನಿವಾರ ನಡೆಯಿತು.

ಜಾಲಪ್ಪ ಅವರ ಸ್ವಗ್ರಾಮವಾದ ತೂಬಗೆರೆಗೆ ಶುಕ್ರವಾರ ರಾತ್ರಿಯೇ ತರಲಾಗಿತ್ತು. ಸ್ವಗ್ರಾಮದಲ್ಲಿ ಸಾರ್ವಜನಿಕರ ದರ್ಶನ ಮುಗಿದ ನಂತರ 11 ಗಂಟೆಗೆ ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ತರಲಾಯಿತು.

ಮಧ್ಯಾಹ್ನ 1.30 ರಿಂದ ಆರ್ ಎಲ್ ಜೆ ಐಟಿ ಕಾಲೇಜಿನ ಜಾಲಪ್ಪ ಕಲಾ ಮಂದಿರದಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಗಣ್ಯರ ದರ್ಶನ ಆರಂಭವಾಗಿದೆ. ಸಂಜೆ 4 ರ ನಂತರ ಕಾಲೇಜಿನ ಕ್ಯಾಂಪಸ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಗೆ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ.

ಗಣ್ಯರಿಂದ ಅಂತಿಮ ನಮನ:
ಜಾಲಪ್ಪ ಅವರ ಪಾರ್ಥಿವ ಶರೀರಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಜಾಲಪ್ಪ ಅವರ ಆತ್ಮೀಯ ಒಡನಾಡಿಗಳಾಗಿದ್ದ ಎಸ್.ಎಂ.ಕೃಷ್ಣ, ಸಂಸತ್ ಸದಸ್ಯ ಬಿ.ಎನ್.ಬಚ್ಚೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್, ಶಾಸಕ ಟಿ.ವೆಂಕಟರಮಣಯ್ಯ, ಜಿ.ಟಿ.ದೇವೇಗೌಡ, ಮಾಜಿ ಶಾಸಕ ಆರ್.ಜಿ.ವೆಂಕಟಾಚಲಯ್ಯ, ಅಂಜನಮೂರ್ತಿ ಸೇರಿದಂತೆ ಹಲವಾರು ಗಣ್ಯರು ಅಂತಿಮ ನಮನ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT