ಮಂಗಳವಾರ, ಸೆಪ್ಟೆಂಬರ್ 22, 2020
26 °C

ಕೆಸರುಗದ್ದೆಯಾದ ಜಿಗಣಿ-ಬನ್ನೇರುಘಟ್ಟ ರಸ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್: ತಾಲ್ಲೂಕಿನ ಜಿಗಣಿ-ಬನ್ನೇರುಘಟ್ಟ ರಸ್ತೆಯ ಅಭಿವೃದ್ಧಿ ಕಾರ್ಯ ಪೂರ್ಣಗೊಳ್ಳದಿರುವುದರಿಂದ ರಸ್ತೆಗಳಲ್ಲಿ ಗುಂಡಿಗಳು ಬಿದ್ದು ಮಳೆ ಬಂದರೆ ಜನರು ಕೆಸರು ಗದ್ದೆಯಲ್ಲಿ ಸಂಚರಿಸುವಂತಾಗುತ್ತದೆ. ದ್ವಿಚಕ್ರ ವಾಹನ ಸವಾರರು ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಈಚೆಗೆ ಸುರಿದ ಭಾರಿ ಮಳೆಗೆ ರಸ್ತೆಯಲ್ಲಿ ನೀರು ತುಂಬಿದೆ. ರಸ್ತೆಯ ಗುಂಡಿಗಳಲ್ಲಿಯೂ ನೀರು ತುಂಬಿರುವುದರಿಂದ ವಾಹನ ಸವಾರರು ಗುಂಡಿಗಳಲ್ಲಿ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ಆರು ತಿಂಗಳಿಗೂ ಹೆಚ್ಚು ಕಾಲ ರಸ್ತೆ ಕಾಮಗಾರಿ ನಡೆಯುತ್ತಿದೆ. ಆದರೆ ಕಾಮಗಾರಿ ಪೂರ್ಣಗೊಂಡಿಲ್ಲ. ಹಾಗಾಗಿ ಜಿಗಣಿ-ಬನ್ನೇರುಘಟ್ಟ ರಸ್ತೆಯು ಮಳೆ ಬಂದರೆ ಕೆಸರು ಗದ್ದೆಯಾಗಿ ಬದಲಾಗುತ್ತದೆ.

ರಸ್ತೆಯ ಒಂದು ಭಾಗದಲ್ಲಿ ಕಾಮಗಾರಿ ನಡೆಯುತ್ತಿದ್ದರೆ ಮತ್ತೊಂದು ಭಾಗದಲ್ಲಿ ಮಳೆಯಿಂದಾಗಿ ನೀರು ತುಂಬಿದೆ. ಗುಂಡಿಗಳಿಂದ ತುಂಬಿರುವ ಈ ರಸ್ತೆಯಲ್ಲಿ ಪ್ರಯಾಣಿಸುವುದು ಸರ್ಕಸ್‌ ಮಾಡಿದಂತಾಗುತ್ತದೆ. ಸುಮಾರು ಐದು ಕಿ.ಮೀ.ಗೂ ಹೆಚ್ಚು ದೂರ ಇದೇ ಪರಿಸ್ಥಿತಿಯಿದೆ.

ಕೈಗಾರಿಕಾ ಪ್ರದೇಶವಾಗಿರುವ ಜಿಗಣಿಯಲ್ಲಿ ವಿವಿಧ ಕಾರ್ಖಾನೆಗಳಿವೆ. ಪ್ರತಿನಿತ್ಯ ಸಾವಿರಾರು ಮಂದಿ ಇದೇ ರಸ್ತೆಯಲ್ಲಿ ಸಂಚರಿಸಬೇಕು. ಮಳೆ ಬಂದರಂತೂ ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿದಿನ ಉದ್ಯೋಗಕ್ಕಾಗಿ ಇದೇ ರಸ್ತೆಯಲ್ಲಿ ಸಂಚರಿಸುವ ಜಂಗಾಲ್‌ಪಾಳ್ಯದ ಗಂಗಯ್ಯ ಅಲವತ್ತುಕೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು