ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Last Updated 23 ಜೂನ್ 2020, 14:46 IST
ಅಕ್ಷರ ಗಾತ್ರ

ಸೂಲಿಬೆಲೆ: ಇಟ್ಟಸಂದ್ರ, ಕಂಬಳೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೆಲವು ವರ್ಷಗಳಿಂದ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿದ್ದವು. ಈ ಗ್ರಾಮಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಸೂಲಿಬೆಲೆ ಹೋಬಳಿಯ ಈಸ್ತೂರು, ಚೀಮಸಂದ್ರ, ಅನುಪಹಳ್ಳಿ, ತಮರಸನಹಳ್ಳಿ, ದೊಡ್ಡಹರಳಗೆರೆ, ಶಶಿಮಾಕನಹಳ್ಳಿ, ಟಿ.ಅಗ್ರಹಾರ ಗ್ರಾಮಗಳಲ್ಲಿ ಸುಮಾರು ₹ 1 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಮಂಗಳವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.

ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಮಾದರಿ ತಾಲ್ಲೂಕನ್ನಾಗಿ ರೂಪಿಸಲು ಯೋಜನೆ ಹಾಕಿಕೊಳ್ಳಲಾಗಿದೆ.ನಿನ್ನೆ ಅಧಿಕಾರಿಗಳ ಜೊತೆ ಸಭೆ ನಡೆಸಿ, ಹೊಸಕೋಟೆ ನಗರದಲ್ಲಿ ಸ್ವಯಂಪ್ರೇರಿತ ‘ಲಾಕ್ ಡೌನ್’ ಜಾರಿಗೊಳಿಸಲಾಗಿದೆ. ಗ್ರಾಮಸ್ಥರು ಪಟ್ಟಣಕ್ಕೆ ಬರುವುದನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.

ಹೊಸಕೋಟೆ ಟಿಎಪಿಸಿಎಂಎಸ್ ಉಪಾಧ್ಯಕ್ಷ ಬಿ.ಎನ್.ಗೋಪಾಲಗೌಡ, ಸೂಲಿಬೆಲೆ ಸಹಕಾರ ಬ್ಯಾಂಕ್ ಅಧ್ಯಕ್ಷ ಸತೀಶಗೌಡ, ಉಪಾಧ್ಯಕ್ಷ ಮುನಿಯಪ್ಪ, ನಿರ್ದೇಶಕರಾದ ಎ.ನಾರಾಯಣಪ್ಪ, ಮುನಿಶ್ಯಾಮಿಗೌಡ ಇಟ್ಟಸಂದ್ರ ಬಿ.ಗೋಪಾಲ್, ಭುವನಹಳ್ಳಿ ಗೋಪಾಲಪ್ಪ, ತಾ.ಪಂ.ಸದಸ್ಯ ಡಿ.ಟಿ.ವೆಂಕಟೇಶ್, ನಾಗರಾಜಪ್ಪ, ಗ್ರಾ.ಪಂ. ಸದಸ್ಯ ಅಂಜದ್ ಬೇಗ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT