ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಬರಿ ಗ್ಯಾಂಗ್‌ ಬಂಧನ

Last Updated 19 ಜನವರಿ 2021, 1:41 IST
ಅಕ್ಷರ ಗಾತ್ರ

ದೊಡ್ಡಬಳ್ಳಾಪುರ: ತಡರಾತ್ರಿಗಳಲ್ಲಿ ಬಾರ್‌ ಹಾಗೂ ಬಾರ್ ಕ್ಯಾಷಿಯರ್‌ಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಹಲ್ಲೆ, ಕಳವು ಮಾಡಿ ಪರಾರಿಯಾಗುತ್ತಿದ್ದ ಖದೀಮರ ತಂಡ ಪೊಲೀಸರ ಬಲೆಗೆ ಬಿದ್ದಿದೆ.

ತಡರಾತ್ರಿಯಲ್ಲಿ ನಗದು ಹಾಗೂ ಚಿನ್ನಾಭರಣ ಹೆಚ್ಚು ಧರಿಸಿ ಓಡಾಡುವವರನ್ನೇ ಗುರಿಯಾಗಿಸಿಕೊಂಡು ಬೈಕ್‌ಗಳಲ್ಲಿ ಹಿಂಬಾಲಿಸಿಕೊಂಡು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಹಣ ದೋಚುತಿದ್ದ ತಂಡ ದೊಡ್ಡಬಳ್ಳಾಪುರ ಉಪವಿಭಾಗದ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಇದೇ ರೀತಿ ಪ್ರಕರಣ ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ನವೆಂಬರ್‌ 1 ರಂದು ನಡೆದಿತ್ತು. ರಾಜಾನುಕುಂಟೆ ಬಳಿಯ ರಚನಾ ಬಾರ್‌ ಕ್ಯಾಷಿಯರ್ ಗಿರೀಶ್ ಕೆಲಸ ಮುಗಿಸಿ ಬಾಗಿಲು ಹಾಕಿ ಹಣದೊಂದಿಗೆ ಮನೆಗೆ ಹೊರಟ್ಟಿದ್ದ ಸಂದರ್ಭದಲ್ಲಿ ನಾಲ್ವರು ಜನ ದುಷ್ಕರ್ಮಿಗಳು ಹಿಂಬಾಲಿಸಿ ₹2.20 ಲಕ್ಷ ಹಣ ದೋಚಿ ಪರಾರಿಯಾಗಿದ್ದರು.

ಈ ಭಯಾನಕ ರಾಬರಿ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ರಾಜಾನುಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿ ಟಿವಿ ಕ್ಯಾಮೆರಾ ಪುಟೇಜ್ ಆಧಾರದ ಮೇಲೆ ರಾಬರಿ ಗ್ಯಾಂಗ್‌ನ ಎಂಟು ಜನರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ. ವಿಚಾರಣೆಯಲ್ಲಿ 12 ರಾಬರಿ ಪ್ರಕರಣಗಳನ್ನು ಪೊಲೀಸರ ಬೇಧಿಸಿದ್ದಾರೆ. ಇದರಲ್ಲಿ ಪ್ರಮುಖವಾಗಿ ದೊಡ್ಡಬಳ್ಳಾಪುರ ನಗರದಲ್ಲಿ ಪೆಟ್ರೋಲ್ ಬಂಕ್‌ನಲ್ಲಿ ಮಾರಕಾಸ್ತ್ರ ತೋರಿಸಿ ನಗದು ದರೋಡೆ, ವೈನ್ ಶಾಪ್‌ಗಳಿಗೆ ಕನ್ನ ಪ್ರಕರಣಗಳು ಸೇರಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT