ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ₹ 44.97 ಲಕ್ಷ ಮೌಲ್ಯದ ಪೇಸ್ಟ್ ಚಿನ್ನ ವಶ

Last Updated 26 ಜೂನ್ 2022, 7:31 IST
ಅಕ್ಷರ ಗಾತ್ರ

ದೇವನಹಳ್ಳಿ: ತಾಲ್ಲೂಕಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಆಗಮಿಸಿದ್ದ ಪ್ರಯಾಣಿಕರೊಬ್ಬರು ಅಕ್ರಮವಾಗಿ ಸಾಗಿಸುತ್ತಿದ್ದ ಪೆಸ್ಟ್‌ ರೂಪದ 881.9 ಗ್ರಾಂ ಚಿನ್ನವನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಶನಿವಾರ ದುಬೈನಿಂದ ಆಗಮಿಸಿದ ಎಲ್ಲಾ ಪ್ರಯಾಣಿಕರನ್ನು ಪರಿಶೋಧನೆ ನಡೆಸಲಾಯಿತು.

ಈ ವೇಳೆ ಅಕ್ರಮವಾಗಿ ಚಿನ್ನ ಸಾಗಣೆ ಮಾಡುತ್ತಿದ್ದ ಪ್ರಕರಣ ಪತ್ತೆಯಾಗಿದೆ. ಪ್ರಯಾಣಿಕನಿಂದ ವಶಕ್ಕೆ ಪಡೆದ ಚಿನ್ನದ ಒಟ್ಟು ಮೌಲ್ಯ ₹ 44.97 ಲಕ್ಷವಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT