ಶನಿವಾರ, ಮಾರ್ಚ್ 25, 2023
25 °C

ರಸಗೊಬ್ಬರ ಮಾರಾಟ: ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಪೂರ್ವ ಮುಂಗಾರು ಹಂಗಾಮು ಮುಗಿದಿದ್ದು, ರೈತರು ಬಿತ್ತನೆ ಕಾರ್ಯ ತಯಾರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲಾ ರಸಗೊಬ್ಬರಗಳ ಅಂಗಡಿಗಳಲ್ಲಿ ಕಡ್ಡಾಯವಾಗಿ ದರಪಟ್ಟಿ ಪ್ರದರ್ಶನ ಮಾಡಬೇಕು. ಗರಿಷ್ಠ ಮಾರಾಟ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಬಾರದು ಎಂದು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ರೇವಣ್ಣಸಿದ್ದಪ್ಪ ತಿಳಿಸಿದರು.

ನಿಗದಿಗಿಂತ ಹೆಚ್ಚು ಬೆಲೆಗೆ ಮಾರಾಟ ಮಾಡಿದರೆ ಅಂತಹ ಅಂಗಡಿಗಳ ಲೈಸೆನ್ಸ್‌ ರದ್ದುಗೊಳಿಸಲಾಗುವುದು. ರಸಗೊಬ್ಬರ ಖರೀದಿಸಿದಾಗ ಕಡ್ಡಾಯವಾಗಿ ಬಿಲ್‌ ಪಡೆಯಬೇಕು. ಅಂಗಡಿಗಳ ಬಳಿ ಕಡ್ಡಾಯವಾಗಿ ಸ್ಯಾನಿಟೈಸರ್ ಇಟ್ಟಿರಬೇಕು. ಮಾಸ್ಕ್ ಧರಿಸಿರಬೇಕು. ಅಂತರ ಕಾಪಾಡಿಕೊಳ್ಳಬೇಕು. ಹೆಚ್ಚು ಜನಸಂದಣಿ ಇರದಂತೆ ಗಮನಹರಿಸಬೇಕು ಎಂದು ವ್ಯಾಪಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

ವಿಜಯಪುರದಲ್ಲಿ 10 ರಸಗೊಬ್ಬರ ಮಾರಾಟದ ಅಂಗಡಿಗಳು ವೆಂಕಟಗಿರಿಕೋಟೆಯಲ್ಲಿ ಒಂದು ಇದೆ. ರೈತರಿಗೆ ರಸಗೊಬ್ಬರ ಸಮಸ್ಯೆಯಾಗದಂತೆ ಗಮನಹರಿಸಲಾಗಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು