ಬುಧವಾರ, ಆಗಸ್ಟ್ 10, 2022
21 °C

ಸಮಾಜದ ಪ್ರಗತಿಗೆ ಗ್ರಾಮೀಣ ಕಸಬುಗಾರಿಕೆ ಸಹಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಪರಂಪರೆಯ ಮೂಲವಾದ ಗ್ರಾಮೀಣ ಕಸಬುಗಾರಿಕೆ‌ ಮುಂದುವರಿಸಲು ಆದ್ಯತೆ ನೀಡಬೇಕೆಂದು ಜಿಲ್ಲಾ ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ.ಮಂಜುನಾಥ್ ಹೇಳಿದರು.

ಇಲ್ಲಿನ ವಿವಿಧೋದ್ದೇಶ ಕೈಗಾರಿಕಾ ಸಹಕಾರಿ ಸಂಘದ ಕಚೇರಿ ಅವರಣದಲ್ಲಿ 2019–20ನೇ ಸಾಲಿನ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಅನುದಾನದಲ್ಲಿ ಅರ್ಹ ಫಲಾನುಭವಿಗಳಿಗೆ ಹೊಲಿಗೆಯಂತ್ರ, ಬಡಗಿ, ಮಡಿವಾಳ ,ಭಜಂತ್ರಿ ಮತ್ತು ಗಾರೆ ಕಾರ್ಮಿಕರಿಗೆ ವಿವಿಧ ಪರಿಕರ ವಿತರಿಸಿ ಮಾತನಾಡಿದರು.

ಅಧುನಿಕ ಬೆಳವಣಿಗೆಯಲ್ಲಿ ಗ್ರಾಮೀಣ ಮೂಲ ಕಸಬುಗಾರಿಕೆ ಕಣ್ಮರೆಯಾಗುತ್ತಿದೆ. ಕಸಬುಗಾರಿಕೆ ಉಳಿಯಬೇಕು ಎಂಬ ಉದ್ದೇಶದಿಂದ ಸರ್ಕಾರ ಪ್ರೋತ್ಸಾಹದಾಯಕ ಯೋಜನೆ ರೂಪಿಸಿದೆ ಎಂದರು. 

ವಿವಿಧೋದ್ದೇಶ ಕೈಗಾರಿಕಾ ಸಹಕಾರ ಸಂಘದ ಕಾರ್ಯದರ್ಶಿ ಶ್ರೀನಿವಾಸಮೂರ್ತಿ, ಕೈಗಾರಿಕಾ ಇಲಾಖೆ ವಿಸ್ತರಣಾಧಿಕಾರಿ ನಾರಾಯಣಸ್ವಾಮಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು