ಶುಕ್ರವಾರ, ಜನವರಿ 27, 2023
20 °C

ಎಸ್‌. ಮಾರ್ಟಿನ್‌ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಆನೇಕಲ್:  ಪಟ್ಟಣದ ಎಎಸ್‌ಬಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಎಸ್‌. ಮಾರ್ಟಿನ್‌ (58) ಹೃದಯಾಘಾತದಿಂದ ಸೋಮವಾರ ನಿಧನರಾಗಿದ್ದಾರೆ. 

ಮೃತರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ.

ಆನೇಕಲ್‌ ಎಎಸ್‌ಬಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ಕಳೆದ ಎರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಅವರು ಸರ್ಕಾರಿ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ಕೊಡುಗೆ ನೀಡಿದ್ದಾರೆ.

ಹಳೆಯ ವಿದ್ಯಾರ್ಥಿಗಳು ಮತ್ತು ದಾನಿಗಳ ಸಹಕಾರ ಪಡೆದು ಕಾಲೇಜಿಗೆ ಮೂಲ ಸೌಲಭ್ಯ ಕಲ್ಪಿಸಲು ಶ್ರಮಿಸಿದ್ದರು. ಕಾಲೇಜಿನಲ್ಲಿ ಕಳೆದ ಐದಾರು ವರ್ಷಗಳಿಂದ ವಿದ್ಯಾರ್ಥಿಗಳ ಸಂಖ್ಯೆ 200 ದಾಟಿರಲಿಲ್ಲ. ಆದರೆ, ಅವರ ಕಾಳಜಿಯಿಂದ ದಾಖಲಾತಿ ಸಂಖ್ಯೆ 500ಕ್ಕೆ ತಲುಪಿತ್ತು. ಕಂಪ್ಯೂಟರ್‌ ವಿಭಾಗವನ್ನು ಸ್ಥಾಪಿಸುವಲ್ಲಿ ಶ್ರಮಿಸಿದ್ದರು.

ಮೃತರ ಅಂತ್ಯಕ್ರಿಯೆಯು ಸಂಜೆ ಬೆಂಗಳೂರಿನಲ್ಲಿ ನಡೆಯಿತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.