ಮಾದರಿ ತಯಾರಿಕೆ ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಹಕಾರಿ

7

ಮಾದರಿ ತಯಾರಿಕೆ ವಿದ್ಯಾರ್ಥಿಗಳ ಕ್ರಿಯಾಶೀಲತೆಗೆ ಸಹಕಾರಿ

Published:
Updated:
Prajavani

ದೊಡ್ಡಬಳ್ಳಾಪುರ: ನಗರದ ಸ್ವಾಮಿ ವಿವೇಕಾನಂದ ಆಂಗ್ಲಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆ ವತಿಯಿಂದ ಶಾಲಾ ಆವರಣದಲ್ಲಿ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು.

ವಸ್ತು ಪ್ರದರ್ಶನದಲ್ಲಿ ವಿದ್ಯಾರ್ಥಿಗಳೇ ಸಿದ್ಧಪಡಿಸಿದ್ದ ಮಳೆ ನೀರು ಸಂಗ್ರಹಣೆ, ಮೇಲ್ಚಾವಣಿ ಮಳೆ ನೀರು ಸಂಗ್ರಹ ಸೇರಿದಂತೆ ವಿಜ್ಞಾನದ ಹಲವು ಮಾದರಿಗಳನ್ನು ಪ್ರದರ್ಶಿಸಲಾಗಿತ್ತು. ಈ ಮಾದರಿಗಳ ಕುರಿತು ವಿದ್ಯಾರ್ಥಿಗಳು ವಿವರಣೆ ನೀಡಿದರು.

ವಸ್ತು ಪ್ರದರ್ಶನದ ಬಗ್ಗೆ ಮಾಹಿತಿ ನೀಡಿದ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ.ಬಿ.ಗುರುದೇವ್, ಪಠ್ಯದಲ್ಲಿ ವಿವರಿಸಿರುವ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದ ಮಾದರಿಗಳನ್ನು ವಿದ್ಯಾರ್ಥಿಗಳೇ ಸಿದ್ಧಪಡಿಸಿದರೆ ವಿಷಯ ಚೆನ್ನಾಗಿ ಮನದಟ್ಟಾಗುತ್ತದೆ. ವಸ್ತು ಪ್ರದರ್ಶನ ವೀಕ್ಷಣೆಗೆ ಬರುವ ವಿದ್ಯಾರ್ಥಿಗಳಿಗೆ ಪ್ರಾಣಿ, ಪಕ್ಷಿಯ ಜೀವನ ಕ್ರಮದ ಬಗ್ಗೆಯೂ ಪ್ರಾಯೋಗಿಕ ಮಾಹಿತಿ ನೀಡುತಿದ್ದಾರೆ. ವಿವರಣೆ ಕೇಳುವಂತಹ ವಿದ್ಯಾರ್ಥಿಗಳಿಗೆ ವಿಷಯ ಚೆನ್ನಾಗಿ ಮನದಟ್ಟು ಆಗುತ್ತದೆ. ಈ ವಸ್ತು ಪ್ರದರ್ಶನವನ್ನು ಪ್ರತಿ ವರ್ಷವೂ ನಡೆಸುತ್ತ ಬರಲಾಗಿದೆ ಎಂದರು.

ಶಾಲೆಯ ಮುಖ್ಯಶಿಕ್ಷಕಿ ಅಸ್ಗರಿಬೇಗಂ, ವೆಂಕಟಲಕ್ಷ್ಮಮ್ಮ ಹಾಗೂ ಶಾಲೆಯ ಶಿಕ್ಷಕ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !