ಬುಧವಾರ, ಜನವರಿ 27, 2021
16 °C
ಜಿಲ್ಲೆಯ 51 ಕೇಂದ್ರಗಳಲ್ಲಿ ಕೋವಿಡ್ 19 ಲಸಿಕೆಗೆ ಸಿದ್ಧತೆ

ವಾರಿಯರ್ಸ್‌ಗೆ ಮೊದಲ ಹಂತದ ಲಸಿಕೆ: ಜಿಲ್ಲಾಧಿಕಾರಿ ರವೀಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ಗ್ರಾಮಾಂತರ ಜಿಲ್ಲೆಯಲ್ಲಿ 51 ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಹೇಳಿದರು.

ಇಲ್ಲಿನ ಆಕಾಶ್ ವೈದ್ಯಕೀಯ ಕಾಲೇಜಿನಲ್ಲಿ ಶುಕ್ರವಾರ ಲಸಿಕೆ ಹಾಕುವ ಅಣಕು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ನಾಲ್ಕು ತಾಲ್ಲೂಕಿನಲ್ಲಿರುವ 46 ಪ್ರಾಥಮಿಕ ಆರೋಗ್ಯ ಕೇಂದ್ರ, ನಾಲ್ಕು ತಾಲ್ಲೂಕಿನ ಸಮುದಾಯದ ಆರೋಗ್ಯ ಕೇಂದ್ರ, ಎರಡು ನಗರ ಘಟಕ ಕೇಂದ್ರ, ಹೊಸಕೋಟೆ ಎಂ.ಇ.ಜೆ, ನೆಲಮಂಗಲ ಸಿದ್ಧಾರ್ಥ, ದೇವನಹಳ್ಳಿ ಆಕಾಶ್ ವೈದ್ಯಕೀಯ ಕಾಲೇಜುಗಳಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ಪ್ರತಿ ಲಸಿಕಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸಲು ಕನಿಷ್ಠ 10 ಸಿಬ್ಬಂದಿ ನಿಯೋಜಿಸಲಾಗಿದೆ. ಯಾವುದೇ ಶಾಲಾ ಕಾಲೇಜುಗಳಲ್ಲಿ ಲಸಿಕೆ ಕೇಂದ್ರ ಆರಂಭಿಸಿಲ್ಲ. ಕೊರೊನಾ ವಾರಿಯರ್ಸ್‌ಗೆ ಮೊದಲ  ಹಂತದಲ್ಲಿ ಲಸಿಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಎರಡನೆ ಹಂತದಲ್ಲಿ ಎನ್.ಸಿ.ಸಿ ಘಟಕ, ಪೊಲೀಸ್ ಸಿಬ್ಬಂದಿಗೆ, ಮೂರನೆ ಹಂತದಲ್ಲಿ 50ವರ್ಷ ಮೆಲ್ಪಟ್ಟವರಿಗೆ ನಂತರ ಕೊರೊನಾ ಸೋಂಕಿನಿಂದ ಗುಣಮುಖರಾಗಿರುವವರಿಗೆ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಮಾನವನ ಜೀವನಕ್ಕೆ ಮೌಲ್ಯ ಕಟ್ಟಲು ಸಾಧ್ಯವಿಲ್ಲ. ಫಲಾನುಭವಿಗಳು ಲಸಿಕೆ ಕೇಂದ್ರದಲ್ಲಿ ತಮ್ಮ ಹೆಸರು ನೋಂದಾಯಿಸಿಕೊಂಡಾಗ ಡಾಟಾದಲ್ಲಿ ನೊಂದಣಿಯಾದ ನಂತರ ಫಲಾನುಭವಿಗಳ ಮೊಬೈಲ್ ಗೆ ಸಂದೇಶ ಬರುತ್ತದೆ. ಆಗ ಬಂದು ಲಸಿಕೆ ಹಾಕಿಸಿಕೊಂಡು ಹೋಗಬಹುದು. ಕಾಯ್ದಿರಿಸಿದ ಕೊಠಡಿ, ಲಸಿಕೆ ನೀಡುವ ಕೊಠಡಿ ಇರಲಿದೆ. ಆಕಸ್ಮಿಕ ಲಸಿಕೆ ಪಡೆದ ನಂತರ ಆರೋಗ್ಯದಲ್ಲಿ ಏರುಪೇರುಯಾದರೆ ಪ್ರಥಮ ಚಿಕಿತ್ಸೆ ನೀಡಲಾಗುವುದು ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ ಮಾತನಾಡಿ, ಪ್ರತಿ ಕೇಂದ್ರದಲ್ಲಿ ಒಂದು ದಿನಕ್ಕೆ 100 ಜನರಿಗೆ ಮಾತ್ರ ಲಸಿಕೆ ನೀಡಲಾಗುತ್ತದೆ. ಪ್ರಸ್ತುತ ಜಿಲ್ಲೆಯಲ್ಲಿ 9347 ಅರ್ಹರು ಲಸಿಕೆ ಪಡೆಯಲು ನೋಂದಣಿ ಮಾಡಿಸಿಕೊಂಡಿದ್ದಾರೆ. ನೋಂದಣಿಗೆ ಅನುಗುಣವಾಗಿ ಹೆಚ್ಚುವರಿ ಲಸಿಕಾ ಕೇಂದ್ರಗಳನ್ನು ತೆರೆಯಲಾಗುವುದು. ಪಲ್ಸ್ ಪೋಲಿಯೊ ಮಾದರಿಯಲ್ಲಿ ಇಡೀ ದೇಶದಲ್ಲಿ ಏಕಕಾಲದಲ್ಲಿ ಆರಂಭಿಸುವ ಸಾಧ್ಯತೆ ಇದೆ ಎಂದು ಹೇಳಿದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಮುನಿರಾಜು, ಡಾ.ಶಕೀಲಾ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸಂಜಯ್ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು