ದೇವನಹಳ್ಳಿ: ಜಿಲ್ಲಾಡಳಿತ ಭವನದ ಆವರಣದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪ್ರತಿಮೆ ನಿರ್ಮಾಣಕ್ಕೆ ಕ್ರಮ ವಹಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಕನಕದಾಸರ ಜಯಂತ್ಯುತ್ಸವ ಉದ್ಘಾಟಿಸಿ ಮಾತನಾಡಿದರು.

ಸಂಗೊಳ್ಳಿ ರಾಯಣ್ಣ ಪ್ರತಿಮೆ ಜೊತೆಗೆ ತಾಲ್ಲೂಕಿನಲ್ಲಿ ಕನಕ ಭವನ ನಿರ್ಮಾಣ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿನಿಲಯ ನಿರ್ಮಾಣಕ್ಕೂ ಬೇಗ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಪ್ರತಿಯೊಂದು ಸಮುದಾಯದವರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಿ, ಉನ್ನತ ಹುದ್ದೆಗಳನ್ನು ಪಡೆದುಕೊಂಡು ಸಮುದಾಯದ ಸರ್ವೋತೋಮುಖ ಏಳಿಗೆ ಹೊಂದಬೇಕು ಎಂದು ತಿಳಿಸಿದರು.

ಬಸವಣ್ಣನವರಂತೆ, 15ನೇ ಶತಮಾನದಲ್ಲಿ ಕನಕದಾಸರು ಸಮಾಜ ಪರಿವರ್ತನೆಗೆ ಶ್ರಮಿಸಿದರು. ಸಮಾಜದ ಪರಿವರ್ತನೆ ಹಾಗೂ ಮೇಲು ಕೀಳು ಎಂಬ ಮನೋಭಾವನೆ ಹೋಗಲಾಡಿಸಲು ಕನಕದಾಸರ ಕೀರ್ತನೆಗಳು ಸಾರ್ವಕಾಲಿಕಕ್ಕೂ ಪ್ರಸ್ತುತ ಎಂದರು.

ಜಾನಪದ ಲೋಕದ ಸಂಶೋದಕ ಡಾ.ಯು.ಎಂ. ರವಿ ಉಪನ್ಯಾಸ ನೀಡಿದರು.

ಇದೇ ಸಂದರ್ಭದಲ್ಲಿ ಎಸ್ಎಸ್ಎಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ದೇವನಹಳ್ಳಿ ಬೈಪಾಸ್ನಲ್ಲಿರುವ ಕನಕದಾಸರ ವೃತ್ತದಿಂದ ಡಾ. ಬಿ.ಆರ್. ಅಂಬೇಡ್ಕರ್ ಭವನದವರೆಗೆ ವಿವಿಧ ಕಲಾತಂಡಗಳೊಂದಿಗೆ ಕನಕದಾಸರ ಉತ್ಸವ ಪಲ್ಲಕ್ಕಿಗಳ ಮೆರವಣಿಗೆ ನಡೆಸಲಾಯಿತು.

ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎನ್ ಅನುರಾಧ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ. ರಾಜಣ್ಣ, ಬಯಪ್ಪ ಅಧ್ಯಕ್ಷ ವಿ. ಶಾಂತಕುಮಾರ, ನಟ ಧ್ರುವ ಸರ್ಜಾ, ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಜಗನ್ನಾಥ್, ದೇವನಹಳ್ಳಿ ಪುರಸಭೆ ಅಧ್ಯಕ್ಷ ಡಿ.ಎಂ ಮುನಿಕೃಷ್ಣಪ್ಪ, ಉಪಾಧ್ಯಕ್ಷ ಜಿ.ಎ. ರವೀಂದ್ರ, ಜಿ.ಪಂ. ಉಪಕಾರ್ಯದರ್ಶಿ ಶಿವಕುಮಾರ್, ದೇವನಹಳ್ಳಿ ತಹಶೀಲ್ದಾರ್ ಅನಿಲ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.