ಶನಿವಾರ, ಫೆಬ್ರವರಿ 29, 2020
19 °C

ಹೊಸಕೋಟೆ: ಜ್ಞಾನ ಗಂಗೋತ್ರಿ ಶಾಲೆಯಲ್ಲಿ ಸಂಭ್ರಮದ ಸಂಕ್ರಾಂತಿ ಉತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಸಕೋಟೆ: ತಾಲ್ಲೂಕಿನ ಉಪ್ಪಾರಹಳ್ಳಿ ಗ್ರಾಮದಲ್ಲಿರುವ ಜ್ಞಾನ ಗಂಗೋತ್ರಿ ಶಾಲೆಯಲ್ಲಿ ಸಂಕ್ರಾಂತಿ ಉತ್ಸವವನ್ನು ಸಡಗರ ಸಂಭ್ರಮದಿಂದ ಶನಿವಾರ ಆಚರಿಸಲಾಯಿತು.

ಗೋವಿಗೆ ಪೂಜೆ ನೆರವೇರಿಸಲಾಯಿತು. ಮಕ್ಕಳು ಸಾಂಪ್ರದಾಯಿಕ ಬಟ್ಟೆ ಧರಿಸಿದ್ದರು. ಶಾಲೆಯ ಮುಂಭಾಗದಲ್ಲಿ ಒಲೆಯಲ್ಲಿ ಹಾಲು ಉಕ್ಕಿಸಿ ಅದಕ್ಕೆ ಪೂಜೆ ನೆರವೇರಿಸಲಾಯಿತು.

ಶಾಲೆಯನ್ನು ಕಬ್ಬು ಮತ್ತು ಮಡಿಕೆಗಳಿಂದ ಸಿಂಗರಿಸಲಾಗಿತ್ತು. ಶಾಲೆಯ ಕಾರ್ಯದರ್ಶಿ ಶ್ರೀರಾಮ್ ಮಾತನಾಡಿ,  ‘ಈಗಿನ ಕಾಲದ ಮಕ್ಕಳಿಗೆ ನಮ್ಮ ಪ್ರಾಚೀನ ಹಬ್ಬಗಳ ರೀತಿ ನೀತಿಗಳು ಗೊತ್ತಿಲ್ಲ. ಆದ್ದರಿಂದ ಶಾಲೆಯಲ್ಲಿ ಭಾರತದ ಹಿರಿಮೆಯನ್ನು ತಿಳಿಸಲು ಪೂರ್ವಜರು ಪಾಲಿಸಿಕೊಂಡು ಬಂದಿದ್ದ ಹಬ್ಬ ಹರಿದಿನಗಳ ಪರಿಚಯ ಮಾಡಲಾಗುತ್ತಿದೆ. ಮಕ್ಕಳಿಗೆ ದೇಶದ ಬಗ್ಗೆ ಅಭಿಮಾನ ಮೂಡಿಸುವುದು ಈ ಕಾರ್ಯಕ್ರಮದ ಉದ್ದೇಶ’ ಎಂದರು.

ಶಾಲೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು