ಶನಿವಾರ, ಡಿಸೆಂಬರ್ 3, 2022
21 °C

ಸರ್ದಾರ್‌ ಪಟೇಲ್‌ ಸೇವೆ ಸ್ಮರಣೀಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದೇವನಹಳ್ಳಿ: ‘ಏಕತೆಯ ತತ್ವದಡಿ ಭಾರತವನ್ನು ರೂಪಿಸಲು ಮುಂದಾಳತ್ವ ವಹಿಸಿದ್ದ ಧೀಮಂತ ನಾಯಕ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಆದರ್ಶ ಎಲ್ಲರಿಗೂ ಪ್ರೇರಣೆಯಾಗಬೇಕಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ‌ ಡಾ.ಕೆ. ಸುಧಾಕರ್
ಆಶಿಸಿದರು.

ಪಟ್ಟಣದಲ್ಲಿ ಸೋಮವಾರ ಜಿಲ್ಲಾ ಬಿಜೆಪಿ ಘಟಕದಿಂದ ಆಯೋಜಿಸಿದ್ದ ಸರ್ದಾರ್‌‌ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

‘ಜೀವನದಲ್ಲಿ ಒಮ್ಮೆಯಾದರೂ ಕೆವಾಡಿಯಾದಲ್ಲಿ ನಿರ್ಮಾಣ ಮಾಡಿರುವ ಏಕತಾ ಪ್ರತಿಮೆಯನ್ನು ಎಲ್ಲರೂ ಕಣ್ತುಂಬಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಪಕ್ಷ ಸಂಘಟನೆಯತ್ತ ಎಲ್ಲರೂ ಗಮನಹರಿಸಬೇಕು. ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಜಿಲ್ಲೆಗೆ ಬಂದಿದ್ದರು. ಈಗ ಪ್ರಗತಿಯ ಪ್ರತಿಮೆ ವಿಚಾರವಾಗಿ ಪ್ರಧಾನಿ ಬರುತ್ತಿರುವುದು ನಮ್ಮ‌ ಸುಯೋಗ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ‌ ಗೆಲ್ಲುವ ಸಾಧ್ಯತೆ ಗೋಚರಿಸುತ್ತಿದೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ ಅವರೊಂದಿಗೆ ಕೆಲಸ ಮಾಡಬೇಕು’ ಎಂದು ಸಲಹೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು