ಸರ್ಜಾಪುರ (ಆನೇಕಲ್): ಸರ್ಜಾಪುರ ಹೋಬಳಿಯಲ್ಲಿ ಕೆಐಎಡಿಬಿ ಭೂ ಸ್ವಾಧೀನ ವಿರೋಧಿಸಿ ಮಾರ್ಚ್ 22ರಂದು ತಾಲ್ಲೂಕಿನ ಸರ್ಜಾಪುರದಲ್ಲಿ ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಲಾಗಿದೆ ಎಂದು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಗೌರವ ಅಧ್ಯಕ್ಷ ಕೆ.ಸಿ.ಜಯಪ್ರಕಾಶ್ ತಿಳಿಸಿದರು.

250 ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದೇವೆ ಆದರೆ ಯಾವುದೇ ಉಪಯೋಗವಾಗುತ್ತಿಲ್ಲ. ಕೆಐಎಡಿಬಿ ಅಧಿಕಾರಿಗಳು ಶನಿವಾರ ತಿಳುವಳಿಕೆ ನೋಟಿಸ್ ನೀಡಲು ಬಂದಿದ್ದಾರೆ. ಆದರೆ ರೈತರೆಲ್ಲಾ ಸಂಘಟಿತರಾಗಿದ್ದು ಒಂದಿಂಚು ಭೂಮಿಯನ್ನು ಸಹ ಕೆಐಎಡಿಬಿ ನೀಡುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದೇವೆ ಎಂದು ತಿಳಿಸಿದರು.

ಸರ್ಜಾಪುರ ಹೋಬಳಿಯಲ್ಲಿ ರೈತರ ಶಕ್ತಿಯನ್ನು ಪ್ರದರ್ಶಿಸಲು ಮಾರ್ಚ್ 22ರಂದು ಟ್ರ್ಯಾಕ್ಟರ್ ರ್ಯಾಲಿ ಆಯೋಜಿಸಲಾಗಿದೆ. ಸಾವಿರಾರು ಮಂದಿ ರೈತರು ಪಾಲ್ಗೊಳ್ಳಲಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸಂಸದ ಡಾ.ಸಿ.ಎನ್.ಮಂಜುನಾಥ್, ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ, ಶಾಸಕ ಸಿ.ಕೆ.ರಾಮಮೂರ್ತಿ, ವಿಧಾನ ಪರಿಷತ್ ಸದಸ್ಯ ಗೋಪಿನಾಥರೆಡ್ಡಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಎಸ್.ಆರ್.ಟಿ.ಅಶೋಕ್, ಮುಖಂಡರಾದ ಹುಲ್ಲಹಳ್ಳಿ ಶ್ರೀನಿವಾಸ್, ಕೃಷ್ಣಾರೆಡ್ಡಿ, ಮಧು, ನಾಗೇಶ್, ಪರಶುರಾಮ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.