ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಂವಿಧಾನ ರಕ್ಷಣೆ, ಪ್ರಜಾಪ್ರಭುತ್ವ ಉಳಿವಿಗಾಗಿ ಜಿಲ್ಲಾ ಜಾಗೃತಿ ಸಮಾವೇಶ

ಜಾಗೃತಿ ಸಮಾವೇಶ
Published 7 ಡಿಸೆಂಬರ್ 2023, 14:43 IST
Last Updated 7 ಡಿಸೆಂಬರ್ 2023, 14:43 IST
ಅಕ್ಷರ ಗಾತ್ರ

ಹೊಸಕೋಟೆ: ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ ಡಿ.27ರಿಂದ ‘ಸಂವಿಧಾನ ರಕ್ಷಣೆಗಾಗಿ ಪ್ರಜಾಪ್ರಭುತ್ವ ಉಳಿವಿಗಾಗಿ’ ಜಿಲ್ಲಾ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಜಿಲ್ಲಾ ಸಂಚಾಲಕ ಕೊರಳೂರು ಶ್ರೀನಿವಾಸ್ ತಿಳಿಸಿದರು.

ನಗರದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.

ಇಡೀ ವಿಶ್ವಕ್ಕೆ ಮಾದರಿಯಾಗಿರುವ ಭಾರತದ ಸಂವಿಧಾನ ಪ್ರತಿಯೊಬ್ಬರೂ ಅರಿತುಕೊಳ್ಳಬೇಕಿದೆ. ಸಂವಿಧಾನ ತಿದ್ದುವ ಹುನ್ನಾರ ನಡೆಯುತ್ತಿವೆ. ಇದಕ್ಕೆ ಅವಕಾಶ ಮಾಡಿಕೊಡದೆ ಸಂವಿಧಾನದ ರಕ್ಷಣೆಗೆ ಟೊಂಕ ಕಟ್ಟಿ ನಿಲ್ಲಬೇಕಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್.ಮುನಿಯಪ್ಪ ಮತ್ತು ದ.ಸ.ಸಂ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಮತ್ತು ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಈ ಕಾರ್ಯಕ್ರಮ ಅಂಗವಾಗಿ ಡಿ.17ರಂದು ಬೆಳಿಗ್ಗೆ 11ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಕುರಿತ ಪ್ರಬಂಧ ಸ್ಫರ್ಧೆ ಏರ್ಪಡಿಸಲಾಗಿದೆ. ಬೆಂಗಳೂರು ಗ್ರಾಮಂತರ ಜಿಲ್ಲಾ ಮಟ್ಟದಲ್ಲಿ ಈ ಸ್ಪರ್ಧೆ ನಡೆಯಲಿದೆ.  ಡಿ.15ರೊಳಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಬೇಕು.

ಮಾಹಿತಿಗೆ: 9986355926, 9449463866, 9620649680

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT