ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಪುರ | ಕನ್ನಡ ಸಾಹಿತ್ಯದ ಹಿರಿಮೆ ಉಳಿಸಿ: ತಾಲ್ಲೂಕು ಕಸಾಪ ಅಧ್ಯಕ್ಷ ನಂಜೇಗೌಡ

Last Updated 15 ಜುಲೈ 2021, 4:07 IST
ಅಕ್ಷರ ಗಾತ್ರ

ವಿಜಯಪುರ:ಕನ್ನಡ ಸಾಹಿತ್ಯಕ್ಕೆ ಇರುವ ಹಿರಿಮೆ ಕುರಿತು ಪ್ರತಿಯೊಬ್ಬ ಕನ್ನಡಿಗರು ತಿಳಿದುಕೊಳ್ಳಬೇಕಾದ ಅನಿವಾರ್ಯ ಎದುರಾಗಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ರಾಮನಾಥಪುರ ಆರ್.ಕೆ. ನಂಜೇಗೌಡ ತಿಳಿಸಿದರು.

ವೆಂಕಟಗಿರಿಕೋಟೆ ಗ್ರಾಮದ ಮಂಜುನಾಥ ಪ್ರೌಢಶಾಲೆಯಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ವತಿಯಿಂದ ಆಯೋಜಿಸಿದ್ದ ಮಾಸಿಕ ಸಿರಿಗನ್ನಡ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ನಾಡಿನ ಹೆಮ್ಮೆಯ ಕವಿಗಳ ಪರಿಚಯ, ಸಾಹಿತ್ಯ, ಸಂಸ್ಕೃತಿ, ನೆಲ, ಜಲದ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕು. ಯುವಪೀಳಿಗೆಯು ಪಾಶ್ಚಿಮಾತ್ಯ ಸಂಸ್ಕೃತಿಯತ್ತ ಮಾರು ಹೋಗುತ್ತಿದೆ. ಭಾಷೆ ಉಳಿಸುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.

ನಿಕಟಪೂರ್ವ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಎನ್. ಕೃಷ್ಣಪ್ಪ ಮಾತನಾಡಿ, ಕನ್ನಡ ಭಾಷೆಗೆ ತನ್ನದೇ ಆದ ಇತಿಹಾಸವಿದೆ. ಭಾಷೆ ಉಳಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಕರವೇ ಗೌರವಾಧ್ಯಕ್ಷ ಚಂದ್ರಶೇಖರ್, ಕಲಾವಿದರ ಸಂಘದ ಅಧ್ಯಕ್ಷ ಮೋಹನ್ ಬಾಬು, ಕರವೇ ಜಿಲ್ಲಾ ಕಾರ್ಯಾಧ್ಯಕ್ಷ ವಿನೋದ್ ಕುಮಾರ್, ಕಸಾಪ ಕೋಶಾಧ್ಯಕ್ಷ ಅಶ್ವತ್ಥ್ ಗೌಡ, ಕಲಾವಿದ ಸುಬ್ಬಣ್ಣಚಾರ್, ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜ್, ಜಗನ್ನಾಥ್, ಮಾರಪ್ಪ, ಎಂ.ವಿ. ಮಂಜುನಾಥ್, ಮಾಜಿ ಸದಸ್ಯ ಜಿ. ಕೃಷ್ಣಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆದರ್ಶ್, ಮುಖಂಡರಾದ ರಾಜಗೋಪಾಲ್, ರಮಾನಂದಚಾರ್, ಶಾಲಾ ಶಿಕ್ಷಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT