ಗುರುವಾರ , ಫೆಬ್ರವರಿ 20, 2020
26 °C

ಗ್ರಾಮೀಣ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಾಗಡಿ: ಗ್ರಾಮೀಣ ಮಕ್ಕಳಲ್ಲಿ ಪ್ರತಿಭಾವಂತರಿದ್ದಾರೆ. ಆದರೆ, ಬಡತನ ಕಾರಣಕ್ಕೆ ಶಿಕ್ಷಣದಿಂದ ವಂಚಿತರಾಗಬಾರದು ಎಂದು ವಿಧಾನ ಪರಿಷತ್‌ ಸದಸ್ಯ ಅ.ದೇವೇಗೌಡ ಕಿವಿಮಾತು ಹೇಳಿದರು.

ಜಮಾಲ್‌ಪಾಳ್ಯದ ವೆಂಕಟ್‌ ಇಂಟರ್‌ ನ್ಯಾಷನಲ್‌ ಸ್ಕೂಲ್‌ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

ಶಾಲಾ ಸಂಸ್ಥಾಪಕ ಗಿರಿಯಪ್ಪ ಮಾತನಾಡಿ ,ಗ್ರಾಮೀಣ ಮಕ್ಕಳ ಜೀವನಮಟ್ಟ ಸುಧಾರಿಸುವ ಉದ್ದೇಶದಿಂದ ಶಿಕ್ಷಣ ಸಂಸ್ಥೆ ಸ್ಥಾಪಿಸಲಾಗಿದೆ. ರೈತಾಪಿ ವರ್ಗದವರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುತ್ತಿದ್ದಾರೆ. ನಗರದ ಮಕ್ಕಳಿಗೆ ಸಿಗುವ ಎಲ್ಲ ಸವಲತ್ತು ಹಳ್ಳಿ ಮಕ್ಕಳಿಗೂ ಸಿಗಬೇಕು ಎನ್ನುವ ಉದ್ದೇಶವಿದೆ. ಶಾಲೆಗೆ ನುರಿತ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದರು.

ಬೆಂಗಳೂರು ವಿಶ್ವವಿದ್ಯಾಲಯದ ಡಾ.ರಾಮಕೃಷ್ಣ, ನಿವೃತ್ತ ಅಧಿಕಾರಿ ಈಶ್ವರ್‌ ಶಿಕ್ಷಣದ ಮಹತ್ವ ಕುರಿತು ಮಾತನಾಡಿದರು. ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಮಕ್ಕಳು ನಡೆಸಿಕೊಟ್ಟ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಗಮನ ಸೆಳೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)