ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ

ಗಿಡ್ಡಪ್ಪನಹಳ್ಳಿ: ಶಾಲಾ ಪ್ರಾರಂಭೋತ್ಸವ
Published 2 ಜೂನ್ 2023, 12:39 IST
Last Updated 2 ಜೂನ್ 2023, 12:39 IST
ಅಕ್ಷರ ಗಾತ್ರ

ಹೊಸಕೋಟೆ: 'ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ನೀಡುತ್ತೇವೆ. ಇದರಲ್ಲಿ ಯಾವುದೇ ರಾಜಿ ಇಲ್ಲ' ಎಂದು ಮುಖ್ಯಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ಬಿ.ಶ್ರೀನಿವಾಸ್ ಹೇಳಿದರು.

ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಗಿಡ್ಡಪ್ಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಪಠ್ಯಪುಸ್ತಕ ವಿತರಿಸಿ ಅವರು ಮಾತನಾಡಿದರು.

’ಸರ್ಕಾರಿ ಶಾಲೆಗಳಲ್ಲಿ ಆಧುನಿಕತೆಗೆ ತಕ್ಕಂತೆ ಮಕ್ಕಳಿಗೆ ತರಬೇತಿ ನೀಡಲಾಗುತ್ತಿದೆ. ಜತೆಗೆ ಸರ್ಕಾರದ ಎಲ್ಲ ಸವಲತ್ತುಗಳನ್ನು ಮಕ್ಕಳಿಗೆ ಒದಗಿಸಲಾಗುತ್ತಿದೆ. ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯ ರೂಪಿಸಬೇಕಾದರೆ ಸರ್ಕಾರಿ ಶಾಲೆಗಳಿಗೆ ಸೇರಿಸಿ’ ಎಂದು ಮನವಿ ಮಾಡಿದರು.

ಗಿಡ್ಡಪ್ಪನಹಳ್ಳಿ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಅಕ್ಬರ್ ಅಲಿಖಾನ್ ಮಾತನಾಡಿ, ’ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲೂ ಶಿಕ್ಷಣಕ್ಕೆ ಹೆಚ್ಚಿನ ಅನುದಾನ ಸಿಗುತ್ತದೆ. ಹಾಗಾಗಿ ಸದುಪಯೋಗ ಪಡಿಸಿಕೊಳ್ಳಿ’ ಎಂದರು.

ಎಸ್‌ಡಿಎಂಸಿ ಅಧ್ಯಕ್ಷ ಜಿ.ಎಂ.ವೆಂಕಟೇಶ್, ಸಹ ಶಿಕ್ಷಕರಾದ ಟಿ.ವಿ.ರಜನಿ, ರಾಜಶೇಖರ್ ಬಿರಾದಾರ್, ವೀಣಾ, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT