ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಪ್ರಾರಂಭೋತ್ಸವ, ಬೀಳ್ಕೊಡುಗೆ

Last Updated 1 ಜೂನ್ 2019, 13:24 IST
ಅಕ್ಷರ ಗಾತ್ರ

ಹೊಸಕೋಟೆ: ಇಲ್ಲಿನ ಸರ್ಕಾರಿ ಬಾಲಕರ ಪ್ರಾಥಮಿಕ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಚ್.ಎಂ. ವೆಂಕಟಮ್ಮ ಅವರಿಗೆ ಬೀಳ್ಕೊಡುಗೆ ಹಾಗೂ ಶಾಲಾ ಪ್ರಾರಂಭೋತ್ಸವವನ್ನು ಆಚರಿಸಲಾಯಿತು.

ಕ್ಷೇತ್ರ ಸಮನ್ವಯ ಅಧಿಕಾರಿಯಾದ ಲಲಿತಮ್ಮ ಅವರು ಮಾತನಾಡಿ, 40 ವರ್ಷಗಳಿಂದ ನಿರಂತರವಾಗಿ ಯಾವುದೇ ಸಮಸ್ಯೆಗಳಿಗೆ ಎಡೆಮಾಡದೆ ಎಲ್ಲಿಯೂ ಕರ್ತವ್ಯ ಲೋಪವೆಸಗದೆ ಸೇವೆಯನ್ನು ಮಾಡಿದ್ದಾರೆ. ಆ ಮೂಲಕ ವೆಂಕಟಮ್ಮ ಅವರು ಇತರರಿಗೆ ಮಾದರಿಯಾಗಿದ್ದಾರೆ ಎಂದರು. ಅವರ ಈ ಗುಣವನ್ನು ಇತರರೂ ರೂಢಿಸಿಕೊಂಡು ನಡೆಯಬೇಕೆಂದರು.

ಶಿಕ್ಷಕರ ಸಂಘದ ಅದ್ಯಕ್ಷ ಮುನಿಶಾಮಣ್ಣ ಮಾತನಾಡಿ, ಸರ್ಕಾರಿ ಬಾಲಕರ ಶಾಲೆಯು ಇಂದಿನ ಸ್ಪರ್ಧಾ ಯುಗದಲ್ಲಿ ಅದರಲ್ಲೂ ನಗರದಲ್ಲಿ ಆಂಗ್ಲ ಮಾಧ್ಯಮದ ಶಾಲೆಗಳ ನಡುವೆ ಅತಿ ಹೆಚ್ಚು ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಹೊಂದಿದೆ. ಜಿಲ್ಲೆಯಲ್ಲಿಯೇ ಉತ್ತಮ ಶಾಲೆಯೆಂದು ಹೆಸರು ಮಾಡಿದೆ. ಇಂತಹ ಶಾಲೆಯಿಂದ ನಿವೃತ್ತಿ ಹೊಂದುತ್ತಿರುವುದು ಹೆಮ್ಮೆಯ ವಿಷಯವೆಂದರು.

ಶಿಕ್ಷಕರ ಸಂಘದ ಕಾರ್ಯದರ್ಶಿ ಎಸ್.ಎಂ. ಮುನಿರಾಜು, ಮುಖ್ಯೋಪಾಧ್ಯಾಯ ರಮೇಶ್ ಹಾಗೂ ಶಾಲೆಯ ಅಭಿವೃದ್ಧಿ ಮಂಡಳಿಯ ಸದಸ್ಯರು, ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಶಾಲೆಯ ಪ್ರಾರಂಭದ ಸಂಕೇತವಾಗಿ ಮಕ್ಕಳಿಗೆ ಪಠ್ಯಪುಸ್ತಕ ಹಂಚಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT