ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಭದ್ರತೆ ಹೆಚ್ಚಳ

Last Updated 20 ಜನವರಿ 2020, 14:17 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೋಲಿಸ್ ಪಹರೆಯೊಂದಿಗೆ ಭದ್ರತೆ ಬಿಗಿಗೊಳಿಸಲಾಗಿದೆ ಎಂದು ಈಶಾನ್ಯವಲಯ ಡಿ.ಸಿ.ಪಿ ಭೀಮಾ ಶಂಕರ್ ಗುಳೇದ್ ಪ್ರಜಾವಾಣಿಗೆ ತಿಳಿಸಿದರು.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರತಿ ವರ್ಷ ಅಗಸ್ಟ್ 15ರಂದು ಮತ್ತು ಜ.26ರಂದು ಗಣರಾಜ್ಯೋತ್ಸವ ಪ್ರಯುಕ್ತ ಭದ್ರತೆಯಲ್ಲಿ ಹೆಚ್ಚಳ ಮಾಡುವುದು ಸಾಮಾನ್ಯ. ಅದೇ ರೀತಿ ಬಾಗಲೂರು, ಚಿಕ್ಕಜಾಲ, ದೇವನಹಳ್ಳಿ ಮತ್ತು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿನ ಪೊಲೀಸರ ಮತ್ತು ಕೇಂದ್ರದ ವಿವಿಧ ಪೊಲೀಸ್ ತುಕಡಿ ಸಿಬ್ಬಂದಿಗಳು ಭದ್ರತೆ ನಿಯೋಜನೆಯಲ್ಲಿದ್ದಾರೆ. ಮೂರು ಪಾಳಿಯಲ್ಲಿ ಕಾರ್ಯ ನಿರ್ವಹಿಸುತ್ತಾ ನಿಗಾ ವಹಿಸುತ್ತಿರುತ್ತಾರೆ ಎಂದು ಹೇಳಿದರು.

ಎರಡು ಹಂತಗಳಲ್ಲಿ ವಾಹನ ಮತ್ತು ಬ್ಯಾಗ್ ತಪಾಸಣೆಗೆ ಒಳಪಡಿಸಲಾಗುತ್ತಿದೆ. ವಿಮಾನಕ್ಕೆ ಎರಡು ಪ್ರವೇಶ ದ್ವಾರಗಳಿದ್ದು ಪ್ರಯಾಣಿಕರನ್ನು ಪರಿಶೀಲಿಸಿಯೇ ಕಳುಹಿಸಲಾಗುತ್ತಿದೆ. ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾಗಿದೆ ಎಂಬ ಮಾಹಿತಿ ಮೆರೆಗೆ ಇನ್ನಷ್ಟು ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT